ಅವಧಿ ಮುಗಿವ ಮುನ್ನ ಅಭಿವೃದ್ಧಿ ಕಾರ್ಯ ನಿರ್ವಹಿಸಿ: ಜಿಎನ್ಎನ್
ಯಳಂದೂರು: ಚುನಾಯಿತ ಪ್ರತಿನಿಧಿಗಳು ಅಧಿಕಾರವಧಿ ಮುಗಿಯವ ಮುನ್ನ ಅಭಿವೃದ್ಧಿ ಕಾರ್ಯ ನಿರ್ವಹಿಸುವುದು ಅಗತ್ಯ ಎಂದು ಶಾಸಕ ಜಿ.ಎನ್.ನಂಜುಂಡಸ್ವಾಮಿ ಹೇಳಿದರು.
ತಾಲೂಕಿನ ಹೊನ್ನೂರು ಗ್ರಾಪಂ ವ್ಯಾಪ್ತಿಗೆ ಸೇರಿರುವ ಬೀಚಹಳ್ಳಿ ಗ್ರಾಮದ ಹೊಸ ಬಡಾವಣೆಯಲ್ಲಿ 10 ಲಕ್ಷ ವೆಚ್ಚದ ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಸಮುದಾಯ ಭವನಗಳನ್ನು ನಿರ್ಮಾಣ ಮಾಡಿಸಿಕೊಂಡರೆ ಸಾಲದು. ಆ ಭವನದಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಡೆಯಬೇಕು. ಆಗ ಮಾತ್ರ ಅಂಬೇಡ್ಕರ್ ಆಸೆಗಳು ಈಡೇರುತ್ತವೆ. ಚುನಾಯಿತರಾದ ಜನಪ್ರತಿನಿಧಿಗಳು ಜನರ ಕಷ್ಟ ಸುಖಗಳಿಗೆ ಸ್ಪಂದಿಸಿ, ಕ್ಷೇತ್ರದ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ಜವಾಬ್ದಾರಿ ಅರಿತು ಜನರಿಗೆ ಅನುಕೂಲವಾಗುವಂಥ ಯೋಜನೆ ರೂಪಿಸಬೇಕು ಎಂದರು.
ಬೀಚಹಳ್ಳಿ ಗ್ರಾಮ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ನನ್ನ ಗಮನಕ್ಕೆ ಬಂದಿದೆ. ಪ್ರಥಮ ಹಂತವಾಗಿ ಬೀಚಹಳ್ಳಿ ಗ್ರಾಮಕ್ಕೆ 20 ಲಕ್ಷ ವೆಚ್ಚದ ಸಿಸಿ ರಸ್ತೆ ರಸ್ತೆ ನಿರ್ಮಿಸಿದ್ದು, ಗ್ರಾಮದ ಜನರು ಒಂದು ಕಡೆ ಕುಳಿತು ನ್ಯಾಯ ಪಂಚಾಯಿತಿ, ಶುಭ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ 10 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ನಿರ್ಮಿತಿ ಕೇಂದ್ರದ ಸಹಯೋಗದೊಂದಿಗೆ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದರು.
ಗ್ರಾಪಂ ಅಧ್ಯಕ್ಷೆ ರಾಧ ಗುರುಸ್ವಾಮಿ, ಉಪಾಧ್ಯಕ್ಷೆ ವಿಮಲಾ, ಬಿಜೆಪಿ ಮುಖಂಡ ಸತೀಶ್, ಡಿ.ಎನ್.ರೇವಣ್ಣ, ಗ್ರಾಪಂ ಸದಸ್ಯರಾದ ಆರ್.ಪುಟ್ಟತಾಯಮ್ಮ, ಆರ್.ಪುಟ್ಟಬಸವಯ್ಯ, ಎಂಜಿನಿಯರ್ ರವಿ, ಗ್ರಾಮಸ್ಥರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

