ಚಾಮರಾಜನಗರ

ಹಂದಿ ದಾಳಿ: ರೈತ ಸಾವು

Published On :

ಗುಂಡ್ಲುಪೇಟೆ: ಕಾಡು ಹಂದಿ ದಾಳಿ ನಡೆಸಿ ಗಾಯಗೊಂಡು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಾಗಿದ್ದ ತಾಲೂಕಿನ ಹೊರೆಯಾಲ ಗ್ರಾಮದ ಮಹದೇವಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ವಾರದ ಹಿಂದೆ ಜಮೀನಿನ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಆಕಸ್ಮಿಕವಾಗಿ ಕಾಡು ಹಂದಿ ದಾಳಿ ನಡೆಸಿ ತೀವ್ರತರ ಗಾಯ ಮಾಡಿತ್ತು. ಶವಪರೀಕ್ಷೆ ನಂತರ ವಾರಸುದಾರರಿಗೆ ಶವವನ್ನು ನೀಡಲಾಗಿದೆ. ಕೂಲಿ ಕಾರ್ಮಿಕ ಮಹದೇವಶೆಟ್ಟಿಯ ಕುಟುಂಬಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಜೆಡಿಎಸ್ ಅಧ್ಯಕ್ಷ ಎಚ್.ಎಂ.ಮಹೇಶ್ ಒತ್ತಾಯಿಸಿದ್ದಾರೆ.
ಬಿಎಸ್ಪಿ ಬೈಕ್ ರ್ಯಾಲಿ
ಮೈಸೂರು: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಬೆಂಗಳೂರಿನಲ್ಲಿ ನಡೆಯಲಿರುವ ಬಿಎಸ್ಪಿ ಮಹಾ ಸಮ್ಮೇಳನದಲ್ಲಿ ಭಾಗವಹಿಸಲಿರುವುದನ್ನು ಪ್ರಚಾರ ಮಾಡುವುದಕ್ಕಾಗಿ ಪಕ್ಷದ ಕಾರ್ಯಕರ್ತರು ಭಾನುವಾರ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದರು. ಪುರಭವನ ಆವರಣದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ಬಳಿಕ ಹೊರಟ ಬೈಕ್ ರ್ಯಾಲಿಯು ಎನ್.ಆರ್. ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡರು.
ಹುದ್ದೆಗೆ ತರಬೇತಿ
ಮೈಸೂರು: ಜ್ಞಾನದೀಪ್ತಿ ಸಂಸ್ಥೆಯು ಎಸ್‌ಬಿಐನಲ್ಲಿ ಖಾಲಿ ಇರುವ 1500 ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಹಾಗೂ ಇತರ ರಾಷ್ಟ್ರೀಕೃತ ಬ್ಯಾಂಕ್‌ಗಳ ಕ್ಲರಿಕಲ್ ಹುದ್ದೆಗೆ ತರಬೇತಿ ಏರ್ಪಡಿಸಿದೆ. ಫೆ.5 ರೊಳಗೆ ಮೊ. 9844099674 ಸಂಪರ್ಕಿಸಬಹುದು.
ಸಿಇಟಿ ಉದ್ಘಾಟನಾ ಸಮಾರಂಭ
ಚಾಮರಾಜನಗರ: ನಗರದ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಫೆ.4ರಂದು ಮಧ್ಯಾಹ್ನ 12.30ಕ್ಕೆ ಸಿಇಟಿ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.