ಮೈಸೂರು: ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಜೆಡಿಎಸ್ಗೆ ಸೇರುವ ಸಂಬಂಧ ಪಕ್ಷದೊಳಗೆ ಚರ್ಚೆ ನಡೆದಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಸ್. ಚಿಕ್ಕಮಾದು ಹೇಳಿದರು.
ಅಂತೆಯೇ ಬಿಜೆಪಿ ಮುಖಂಡರಾದ ಜಿ.ಟಿ. ದೇವೇಗೌಡ ಅವರು ಪಕ್ಷಕ್ಕೆ ಸೇರುವ ವಿಚಾರ ಪಕ್ಷದಲ್ಲಿ ಚರ್ಚೆ ನಡೆದಿದೆ. ಅವರು ಪಕ್ಷಕ್ಕೆ ಬಂದರೆ ಸ್ವಾಗತವಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜೆಡಿಎಸ್ ಸಮಾವೇಶವು ಫೆ. 6 ರಂದು ಸಂಜೆ 4 ಕ್ಕೆ ಟಿ. ನರಸೀಪುರದ ಎಪಿಎಂಸಿ ಯಾರ್ಡ್ನಲ್ಲಿ ನಡೆಯಲಿದ್ದು, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸುವರು.
ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ, ಕಾರ್ಯಾಧ್ಯಕ್ಷ ಎಸ್ಬಿಎಂ ಮಂಜು, ಮುಖಂಡರಾದ ನಿವೃತ್ತ ಎಸಿಪಿ ಚೆಲುವರಾಜ್, ಟಿ. ನರಸೀಪುರ ಸುಂದರೇಶ್ ಇದ್ದರು.