ಜೆಡಿಎಸ್‌ಗೆ ಅಧಿಕಾರ: ಬಾಲರಾಜು

Updated on: 

ಯಳಂದೂರು: ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಆಡಳಿತ ಚುಕ್ಕಾಣಿ ಹಿಡಿದ ಬಿಜೆಪಿ ಸರ್ಕಾರದ ಬಗ್ಗೆ ಜನತೆ ನಂಬಿಕೆ ಕಳೆದುಕೊಂಡಿದ್ದು, ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಶಾಸಕ ಎಸ್.ಬಾಲರಾಜು ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ರಾಘವೇಂದ್ರ ಮಠದಲ್ಲಿ ಏರ್ಪಡಿಸಿದ್ದ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ ಅಗತ್ಯ ಬೇಕಾದ ಕಾಲೇಜು, ಕಾವೇರಿ ನೀರು ಸರಬರಾಜು, ಬಿಳಿಗಿರಿರಂಗನ ಬೆಟ್ಟ ಅಭಿವೃದ್ಧಿಗೆ 25 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ವಿವಿಧ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಕೊಳ್ಳೇಗಾಲ ಕ್ಷೇತ್ರದ ವಿವಿಧೆಡೆ 6 ಪ್ರೌಢಶಾಲೆಗಳನ್ನು ತೆರೆಯಲಾಗಿದೆ ಎಂದರು. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಕೇಂದ್ರದಲ್ಲಿರುವ  ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತ ಜನತೆ ಈ ಬಾರಿ ಜೆಡಿಎಸ್‌ನ್ನು ಅಧಿಕಾರಕ್ಕೆ ತರಲಿದ್ದಾರೆ. ವಿವಿಧ ಪಕ್ಷದ ಮುಖಂಡರು ಸೇರಿದಂತೆ ಹಲವರು ಜೆಡಿಎಸ್‌ಗೆ ಸೇರ್ಪಡೆಯಾಗಲಿದ್ದು, ಮುಂದಿನ ತಿಂಗಳು ಕ್ಷೇತ್ರದಲ್ಲಿ ಸಮಾವೇಶ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದರು. ತಾಪಂ ಸದಸ್ಯ ವೆಂಕಟಚಲ, ತಾಲೂಕು ಜೆಡಿಎಸ್ ಅಧ್ಯಕ್ಷ ಬಂಗಾರಸ್ವಾಮಿ, ಕಾರ್ಯಾಧ್ಯಕ್ಷ ಡಿ.ಸಿ.ಬಾಬು, ಟೌನ್ ಎಸ್‌ಟಿ ಘಟಕದ ಅಧ್ಯಕ್ಷ ರಾಜಶೇಖರ್, ಶ್ರೀನಿವಾಸ ಪ್ರಸಾದ್, ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದಪ್ಪಸ್ವಾಮಿ, ಮದ್ದೂರು ಸೋಮಶೇಖರ್, ರಾಚಶಟ್ಟಿ ಸೇರಿದಂತೆ ಹಲವರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com