ಚಾಮರಾಜನಗರ: ಜಿಲ್ಲೆಯಲ್ಲಿ ಚಿಕಿತ್ಸೆ ಒದಗಿಸುವ ಖಾಸಗಿ ವೈದ್ಯರು ಪ್ರಯೋಗಾಲಯ ಶಾಲೆಗಳ ಮುಖ್ಯಸ್ಥರು ಕ್ಷಯ ರೋಗಿಗಳ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳು ಕಡ್ಡಾಯವಾಗಿ ವರದಿ ಮಾಡುವಂತೆ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಸೂಚಿಸಿದ್ದಾರೆ.ಎಲ್ಲ ಸರ್ಕಾರಿ ಆಸ್ಪತ್ರೆ, ಸ್ಥಳೀಯ ಸೇವಾ ಸಂಸ್ಥೆ, ಖಾಸಗಿ ವೈದ್ಯರ ಸೇವಾಸಂಸ್ಥೆ ಆಸ್ಪತ್ರೆ, ಪ್ರಯೋಗ ಶಾಲೆಗಳನ್ನು ವರದಿ ಮಾಡುವ ಸಂಸ್ಥೆಗಳೆಂದು ಪರಿಗಣಿಸಲಾಗಿದೆ. ಕ್ಷಯ ರೋಗಿ ಬಗ್ಗೆ ಮಾಹಿತಿ ನೀಡದೆ ಇರುವುದು ಅಥವಾ ತಪ್ಪು ಮಾಹಿತಿ ನೀಡಿದಲ್ಲಿ ಕಾನೂನು ಅನ್ವಯ ಶಿಸ್ತು ಕ್ರಮ ಜರುಗಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.