ಗುಂಡ್ಲುಪೇಟೆ: ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹಲವಾರು ಮುಸ್ಲಿಂ ಯುವಕರು ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಕೆಜೆಪಿ ಸೇರ್ಪಡೆಗೊಂಡರು. ಕೆಜೆಪಿ ಮುಖಂಡ ಸಿ.ಎಸ್.ನಿರಂಜನಕುಮಾರ್, ತಾಲೂಕು ಅಧ್ಯಕ್ಷ ದೊಡ್ಡಹುಂಡಿ ಜಗದೀಶ್, ಮುಖಂಡ ಎನ್.ಮಲ್ಲೇಶ್, ಪಿ.ಗಿರೀಶ್, ತಾಪಂ ಸದಸ್ಯ ಸಿ.ಮಹದೇವಪ್ರಸಾದ್, ಮಾಜಿ ಪುರಸಭಾ ಅಧ್ಯಕ್ಷ ಎಲ್.ಸುರೇಶ್ ಅವರ ಸಮ್ಮುಖದಲ್ಲಿ ಮುಸ್ತಾಫಖಾನ್, ಏಜಾಜ್ಪಾಷ, ಸಾದಿಕ್ಖಾನ್, ಸಮೀಉಲ್ಲಾ, ಸಿದ್ದಿಕ್ ಅಹಮದ್, ಕಲೀಂ ಪಾಷಾ, ಆಯುಬ್, ಮುನ್ನಾರ್ ದಸ್ತಗೀರ್, ಶಫೀರುದ್ದೀನ್ ಸೇರಿದಂತೆ 80ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ತೊರೆದು ಕೆಜೆಪಿ ಸೇರಿದರು. ನಂತರ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಜನರ ನಿರೀಕ್ಷೆಗೆ ತಕ್ಕಂತೆ ಸ್ಪಂದಿಸದಿರುವ ಕಾರಣ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪರ ಕಾರ್ಯಗಳನ್ನು ಮೆಚ್ಚಿ ಕೆಜೆಪಿಗೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.