ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಚಾಮರಾಜನಗರ: ತಾಲೂಕಿನ ವಿವಿಧ ಗ್ರಾಮಗಳ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 30 ಲಕ್ಷ ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ತಾಲೂಕಿನ ನಲೂರು ಗ್ರಾಮಕ್ಕೆ ಎಸ್ಇಪಿ ಯೋಜನೆಯಡಿ ಕಾಂಕ್ರಿಟ್ ಮತ್ತು ರಸ್ತೆ, ಚರಂಡಿ ನಿರ್ಮಾಣಕ್ಕೆ 5 ಲಕ್ಷ, ಬಸಪ್ಪನಪಾಳ್ಯಕ್ಕೆ 5 ಲಕ್ಷ, ಕೆಲ್ಲಂಬಳ್ಳಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸಂಸದರ ನಿಧಿಯಿಂದ 5 ಲಕ್ಷ, ಹೆಗ್ಗೋಠಾರ ಗ್ರಾಮಕ್ಕೆ ಸಂಸದರ ನಿಧಿಯಿಂದ 5 ಲಕ್ಷ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 10 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಸಂಸದ ಆರ್.ಧ್ರುವನಾರಾಯಣ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು.
ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಶಾಸಕರನ್ನು ಭೇಟಿ ಮಾಡಲು, ಮೈಸೂರು ಅಥವಾ ಬೆಂಗಳೂರಿಗೆ ಹೋಗಬೇಕಾದ ಸ್ಥಿತಿ ಬಂದೊದಗಿದೆ. ಆದರೆ, ಸ್ಥಳೀಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರನ್ನು ಯಾವ ಸಮಯದಲ್ಲಾದರೂ ಕಂಡು ಅವರ ಜೊತೆ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಪ್ರಶಂಸಿಸಿದರು.
ಹಿಂದುಳಿದ ಜನಾಂಗವಾದ ಉಪ್ಪಾರ ಸಮುದಾಯದಲ್ಲಿ ಒಬ್ಬರೇ ಶಾಸಕರಾಗಿದ್ದು, ಬೇರೆ ಸಮುದಾಯಗಳಲ್ಲಿ 20ರಿಂದ 30 ಮಂದಿ ಶಾಸಕರು, ಸಚಿವರಾಗಿದ್ದಾರೆ. ಆದ್ದರಿಂದ ಹಿಂದುಳಿದ ಜನಾಂಗದ ಅಭಿವೃದ್ಧಿಗೆ ಸಹಕರಿಸಲು ಶಾಸಕರ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ನಲ್ಲೂರು ಗ್ರಾಮದಲ್ಲಿ ಅಂಬೇಡ್ಕರ್ ಭವನ ಪೂರ್ಣಗೊಳಿಸಲು 1 ಲಕ್ಷ ನೀಡುತ್ತೇನೆ. ಕಾಡಳ್ಳಿ ಗ್ರಾಮದಲ್ಲಿ ಅರ್ಧಕ್ಕೆ ನಿಂತ ಸಮುದಾಯ ಭವನದ ಕಾಮಗಾರಿ ಪರಿಶೀಲಿಸಿ 10 ಲಕ್ಷ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ನನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ಜನತೆಗೂ ಸಹಕಾರಿಯಾಗುವಂತೆ ಹಲವಾರು ಅಭಿವೃದ್ಧಿ ಕೆಲಸ ನಿರ್ವಹಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಜೆಇ ಗುರುಸಿದ್ದಯ್ಯ, ಪರಮೇಶ್, ಎಇಇ ಸತ್ಯನಾರಾಯಣ, ಗುತ್ತಿಗೆದಾರ ಶ್ರೀಧರಮೂರ್ತಿ, ತಾಪಂ ಸದಸ್ಯೆ ಲಲಿತಾ ನಾಗಯ್ಯ, ಮಹಾಲಿಂಗು, ಗ್ರಾಪಂ ಅಧ್ಯಕ್ಷೆ ಮಹದೇವಮ್ಮ, ಸದಸ್ಯ ನಾಗರಾಜಪ್ಪ, ಸುರೇಶ್, ಬಸವೇಗೌಡರು, ನಟರಾಜು, ರಾಜಶೇಖರ್, ಕಗ್ಗಲ್ಲಯ್ಯ, ಶಿವಸ್ವಾಮಿ, ಪಟೇಲ್ ಕುಮಾರ್, ದುಂಡುಮಾದಯ್ಯ, ಎಚ್.ಬಿ.ಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

