ಭ್ರಷ್ಟಾಚಾರ ತಡೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಬಲ ಅಸ್ತ್ರ
ಯಳಂದೂರು: ಭ್ರಷ್ಟಾಚಾರ ತಡೆಗಟ್ಟುವಲ್ಲಿ ಮಾಹಿತಿ ಹಕ್ಕು ಕಾಯ್ದೆ ಸಹಕಾರಿಯಾಗಿದೆ ಎಂದು ಪಟ್ಟಣದ ಜೆಎಂಎಫ್ಸಿ ಹಾಗೂ ಸಿವಿಲ್ ನ್ಯಾಯಾಧೀಶ ಎಚ್.ಆರ್.ರವಿಕುಮಾರ್ ಹೇಳಿದರು.
ಪಟ್ಟಣದ ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಆಯೋಜಿಸಿದ್ದ ಮಾಹಿತಿ ಹಕ್ಕು ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿನಿತ್ಯ ಸಾವಿರಾರು ಕೋಟಿ ರು.ಗಳನ್ನು ವಿವಿಧ ಇಲಾಖೆಗಳ ಮೂಲಕ ವಿನಿಯೋಗಿಸುತ್ತಿದೆ. ಇದು ಸರಿಯಾಗಿ ಸದ್ಬಳಕೆಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ದೇಶದ ಪ್ರತಿಯೊಬ್ಬ ನಾಗರಿಕನೂ ಮಾಹಿತಿ ಹಕ್ಕಿನ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇಂಥ ಮಾಹಿತಿಗಳನ್ನು ಪಡೆಯುವ ಮೂಲಕ ಭ್ರಷ್ಟಾಚಾರ ತಡೆಗಟ್ಟಿ ಆಡಳಿತದಲ್ಲಿ ಪಾರದರ್ಶಕತೆ ತರಲು ನಾವೆಲ್ಲರೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣರಾಗಬಹುದಾಗಿದೆ ಎಂದರು
ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ. ಮಾದೇಶ ಮಾತನಾಡಿ, 2005ರಲ್ಲಿ ಜಾರಿಗೆ ಬಂದ ಮಾಹಿತಿ ಹಕ್ಕು ಇಂದು ಭ್ರಷ್ಟಾಚಾರ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಮಾಹಿತಿ ಅಪೇಕ್ಷೆ ಪಡುವವರಿಗೆ ರಕ್ಷಣೆ ಒದಗಿಸುವುದು ಸರ್ಕಾರ ಹಾಗೂ ನಾಗರಿಕರಾದ ನಮ್ಮಲ್ಲರ ಕರ್ತವ್ಯ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಎಂ.ವಿ.ಪುಷ್ಪಕುಮಾರ್ ವಹಿಸಿದ್ದರು.ತಾಲೂಕು ವಕೀಲರ ಸಂಘದ ಸದಸ್ಯರಾದ ಎನ್.ಚಿನ್ನಸ್ವಾಮಿ, ವಕೀಲರಾದ ಎನ್. ಸಿದ್ದರಾಮು, ಉಪನ್ಯಾಸಕರಾದ ಡಿ.ವಿ. ಪ್ರಕಾಶಮೂರ್ತಿ, ಎಚ್.ಎಸ್.ಪದ್ಮ ಹೇಮಂತ್ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

