ಹನೂರು: ಕೊಳ್ಳೇಗಾಲ ಗ್ರೇಡ್-2 ತಹಸೀಲ್ದಾರ್ ನಂಜುಂಡಯ್ಯ ಅವರ ಅಧ್ಯಕ್ಷತೆಯಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಅವರು ಮಾತನಾಡಿ, 18 ವರ್ಷ ತುಂಬಿದ ಯುವ ಮತದಾರರು ನಮೂನೆ-6ರ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಇದಕ್ಕೆ ಸಂಬಂಧಪಟ್ಟಂತೆ ಬೂತ್ ಮಟ್ಟದ ಅಧಿಕಾರಿಗಳು ಜ.25 ರಂದು ನಡೆಯುವ ಮತದಾರರ ದಿನಾಚರಣೆಯಲ್ಲಿ ಸೇರ್ಪಡೆಯಾಗದ ಮತದಾರರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು. ಶಿರಸ್ತೇದಾರ್ ಶ್ರೀನಿವಾಸ್, ಉಪತಹಸೀಲ್ದಾರ್ಗಳಾದ ಪ್ರಕಾಶ್ಮೂರ್ತಿ, ಭೈರಯ್ಯ, ಬೂತ್ ಮಟ್ಟದ ಅಧಿಕಾರಿಗಳು ಹಾಜರಿದ್ದರು.