ಚಾಮರಾಜನಗರ

ಗ್ರಾಮೀಣ ಸಂಸ್ಕೃತಿ ಬಿಂಬಿಸುವ ಜಾನಪದ ಕಲೆ: ರಾಮಚಂದ್ರು

Published On :

ಚಾಮರಾಜನಗರ: ಜಾನಪದ ಕಲೆಗಳಿಂದ ಗ್ರಾಮೀಣ ಸಂಸ್ಕೃತಿ ಬಿಂಬಿಸುವಂತಹ ವಿಫುಲ ಅವಕಾಶವಿದೆ ಎಂದು ಬಿಎಸ್‌ಆರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ರಾಮಚಂದ್ರು ತಿಳಿಸಿದರು.
ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಚಾಲೆಂಜರ್ಸ್ ನೃತ್ಯ ಶಾಲೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಜಾನಪದ ನೃತ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇತ್ತೀಚಿನ ದೂರದರ್ಶನ ಹಾಗೂ ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಜಾನಪದ ಕಲೆ ನಶಿಸಿ ಹೋಗುತ್ತಿದೆ. ಹಿಂದೆ ಹಳ್ಳಿ ಹಳ್ಳಿಗಳಲ್ಲಿ ಸೋಬಾನೆ, ಗೀಗಿಪದ ಹಾಗೂ ಮಲೆ ಮಹದೇಶ್ವರ, ಮಂಟೇಸ್ವಾಮಿ, ಬಿಳಿಗಿರಿರಂಗನಾಥಸ್ವಾಮಿ ಕುರಿತ ಜಾನಪದ ಹಾಡುಗಳು ಒಬ್ಬರ ನಾಲಿಗೆಯಿಂದ ಒಬ್ಬರಿಗೆ ಹರಿದಾಡುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಮಾಯವಾಗುತ್ತಿದೆ ಎಂದರು.
ಸಾಹಿತಿ ಮಂಜು ಕೋಡಿಉಗನೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಲ್ಲಿನ ಅನೇಕ ಸಂಸ್ಕೃತಿಯನ್ನೊಳಗೊಂಡಂತಹ ಜಾನಪದ ಕಲೆಗಳು ನಮ್ಮ ಮುಂದಿವೆ. ಇವುಗಳನ್ನು ಉಳಿಸಿ, ಯುವ ಪೀಳಿಗೆಗೆ  ಅರಿವು ಮೂಡಿಸುವ ಅಗತ್ಯ ಇದೆ ಎಂದರು.
ತಾಪಂ ಸದಸ್ಯ ಆರ್.ಮಹದೇವು, ವಕೀಲ ಚಿನ್ನಸ್ವಾಮಿ, ರಾಮಶೇಷ ಪಾಠಶಾಲೆಯ ಪ್ರಾಚಾರ್ಯ ಪ್ರದೀಪ್ ಕುಮಾರ್ ದೀಕ್ಷಿತ್, ಸಿ.ಆರ್.ಬಾಲರಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಬಿ.ಸುಜಯ್ ಕುಮಾರ್, ಮಹದೇವಯ್ಯ, ಸಮಾಜ ಸೇವಕ ಎಲ್.ಸುರೇಶ್, ಚಾ.ಗು. ನಾಗರಾಜ್, ಎಂ.ಶಿವ ಮೂರ್ತಿ, ನೃತ್ಯ ಶಾಲೆಯ ವ್ಯವಸ್ಥಾಪಕ ಬಸವರಾಜು, ಚಿಕ್ಕಬಸವಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.