'ಹಕ್ಕುಗಳ ಪಡೆಯಲು ಶಾಲಾ ಮಕ್ಕಳು ಸಂಘಟಿತರಾಗಿ'
ಚಾಮರಾಜನಗರ: ಶಾಲಾ ಮಕ್ಕಳು ಸಂಘಟಿತರಾಗಿ ತಮಗಿರುವ ಹಕ್ಕುಗಳನ್ನು ಪಡೆವ ಪ್ರಯತ್ನ ಮಾಡಬೇಕೆಂದು ಕೂಡ್ಲೂರು ಗ್ರಾಪಂ ಅಧ್ಯಕ್ಷೆ ಮಹದೇವಮ್ಮ ತಿಳಿಸಿದರು.
ಅವರು ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಗ್ರಾಪಂ ಹಾಗೂ ಮೊಬಿಲಿಟಿ ಇಂಡಿಯಾ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಮಕ್ಕಳ ಗ್ರಾಮ ಸಭೆ ಉದ್ಘಾಟಿಸಿ ಮಾತನಾಡಿದರು.
ತಮ್ಮ ಅಧಿಕಾರದ ಅವಧಿಯಲ್ಲಿ ಶಾಲೆಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು.
ಸದಸ್ಯ ದೊಡ್ಡರಾಯಪೇಟೆ ಗಿರೀಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕಾಗಿ ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ತಮ್ಮ ಹಕ್ಕುಗಳನ್ನು ತಿಳಿದುಕೊಂಡು ಸಂಬಂಧಪಟ್ಟವರ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.
ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿರುವ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳಿಗೆ ವಿವರಿಸಿದರು.
ಗ್ರಾಪಂ ಉಪಾಧ್ಯಕ್ಷ ಜೋಸೆಫ್, ಗ್ರಾಪಂ ಸದಸ್ಯರುಗಳಾದ ರೇವಮ್ಮ, ಮೂರ್ತಿ, ಶಂಕರಪ್ಪ, ಗಿರೀಶ್, ಪಾರ್ವತಮ್ಮ, ಸರಸ್ವತಮ್ಮ, ರೇವಮ್ಮ, ಶ್ರೀನಿವಾಸ್, ರಾಚಪ್ಪ, ಕಾರ್ಯದರ್ಶಿ ಬಿ.ಎನ್.ರಾಜು, ಮೊಬಿಲಿಟಿ ಇಂಡಿಯಾದ ಮಂಜುಳ, ಶಾರದ, ಮುಖ್ಯ ಶಿಕ್ಷಕರು ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

