ಚಾಮರಾಜನಗರ

ಟಿವಿಎಸ್ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣೆ

Published On :

ಚಾಮರಾಜನಗರ: ನಗರದ ಜೋಡಿ ರಸ್ತೆಯಲ್ಲಿರುವ ಚಾಮುಂಡಿ ಟಿವಿಎಸ್ ಸಂಸ್ಥೆ ವತಿಯಿಂದ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ರಕ್ತದ ಗುಂಪು ಪರೀಕ್ಷೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ. ಚಂದ್ರಶೇಖರ ಪ್ರಸಾದ್ ಆರೋಗ್ಯ ತಪಾಸಣೆ, ನೇತ್ರತಪಾಸಣೆ, ರಕ್ತದ ಗುಂಪು ಪರೀಕ್ಷೆ ಮಾಡಿದರು. ಶಿಬಿರದಲ್ಲಿ 339 ಗ್ರಾಹಕರಿಗೆ ಆರೋಗ್ಯ ತಪಾಸಣೆ ಹಾಗೂ ರಕ್ತದ ಗುಂಪು ಪರೀಕ್ಷೆ ನಡೆಸಲಾಯಿತು. ಇದಲ್ಲದೇ ಟಿವಿಎಸ್ ಗ್ರಾಹಕರಿಗೆ ಪೆಟ್ರೋಲ್, ಆಯಿಲ್ ಕಲಬೆರಕೆ, ಇದರಿಂದ ಎಂಜಿನ್ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಉದ್ಯಮಿ ಕುರುಬರಹುಂಡಿ ಮಂಚೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಚಾಮುಂಡಿ ಟಿವಿಎಸ್ ಸಂಸ್ಥೆ  ಮಾಲೀಕ ಕೆ.ಎಂ.ನಾಗೇಶ್, ಜನರಲ್ ಮ್ಯಾನೇಜರ್ ಸೂರಜ್ ಗೌರಿಶಂಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.