'ಮಾನವೀಯ ಮೌಲ್ಯವಂತರಿಗೆ ಮತ ನೀಡಿ'
ಸಕಲೇಶಪುರ: ಯುವ ಜನರು ತಮ್ಮ ಮತದಾನದ ಹಕ್ಕನ್ನು ಉತ್ತಮ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿದ ವ್ಯಕ್ತಿಗಳಿಗೆ ಚಲಾಯಿಸುವ ಮೂಲಕ ದೇಶಹಾಗೂ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಉಪವಿಭಾಗಾಧಿಕಾರಿ ವಿದ್ಯಾಶ್ರೀ ಯುವ ಮತದಾರರಿಗೆ ಸಲಹೆ ನೀಡಿದ್ದಾರೆ.
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಕಲೇಶಪುರ ವಿಧಾನಸಭಾ ಕ್ಷೇತ್ರಕ್ಕೆ ನೂತನವಾಗಿ ಸೇರ್ಪಡೆಗೊಳಿಸಿದ್ದ ತನ್ನ ಗುರುತಿನ ಚೀಟಿಯನ್ನು ಹಿರಿಯ ಶ್ರೇಣಿ ನ್ಯಾಯಾಧೀಶ ಲೋಕಪ್ಪ ಅವರಿಂದ ಸ್ವೀಕರಿಸಿ ನೂತನವಾಗಿ ಸೇರ್ಪಡೆಯಾಗಿದ್ದ ಮತದಾರರಿಗೆ ಉಪವಿಭಾಗಾಧಿಕಾರಿಯವರು ಪ್ರತಿಜ್ಞಾವಿಧಿ ಬೋಧಿಸಿದರು. ಕಿರಿಯ ಶ್ರೇಣಿ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿದರು. ನೂತನವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಮತದಾರರಿಗೆ ಗುರುತಿನ ಚೀಟಿಗಳು ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

