ಸುಧಾಮ ನಗರದಲ್ಲಿ ಉದ್ಯಾನವನಕ್ಕೆ ಗುದ್ದಲಿಪೂಜೆ
ಚಾಮರಾಜನಗರ: ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಒಂದು ಎಕರೆ ನಿವೇಶನದಲ್ಲಿ ಉದ್ಯಾನವನ ನಿರ್ಮಾಣ ಮಾಡಲಾಗುತ್ತಿದೆ ಎಂದು ಚೂಡಾ ಅಧ್ಯಕ್ಷ ಎಸ್.ಬಾಲಸುಬ್ರಮಣಂ ತಿಳಿಸಿದರು.
ಸೋಮವಾರ ಸುಧಾಮ ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಉದ್ಯಾನವನಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಉದ್ಯಾನವನದಲ್ಲಿ ವಿವಿಧ ಜಾತಿಯ ಹೂಗಳು ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಅಲಂಕಾರ ಗಿಡಗಳನ್ನು ಹಾಕಲಾಗುತ್ತದೆ ಎಂದು ತಿಳಿಸಿದರು.
ಪ್ರಾಧಿಕಾರ ಆಯುಕ್ತ ಕೃಷ್ಣ ನಾಯಕ್ ಮಾತನಾಡಿ, ಸಾರ್ವಜನಿಕರು ಬಿಡುವಿನ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ವಾಯುವಿಹಾರ ಹಾಗೂ ವಿಶ್ರಾಂತಿ ತೆಗೆದುಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ಸುಂದರ ಪರಿಸರದಿಂದ ನಮ್ಮ ಮನಸ್ಸಿಗೆ ನೆಮ್ಮದಿ ಜೊತೆಗೆ ಉತ್ತಮ ಆರೋಗ್ಯ ಸಿಗುತ್ತದೆ ಎಂದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಯಾನವನಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಭಾಗ್ಯಮ್ಮ, ಪೌರಾಯುಕ್ತ ಕೃಷ್ಣಮೂರ್ತಿ, ಸದಸ್ಯರಾದ ಸಿ.ಎಸ್.ಮಹದೇವನಾಯಕ, ಶಿವಣ್ಣ, ಮಂಜುನಾಥ್, ವಿ.ಮಂಜುನಾಥ್, ಸುದರ್ಶನ್ಗೌಡ, ನಗರ ಯೋಜನೆ ನಿರ್ದೇಶಕ ವೆಂಕಟೇಶಪ್ಪ, ಪುನೀತ್, ಮುಖಂಡರಾದ ಬಿ.ಕೆ.ರವಿಕುಮಾರ್ ಚಿನ್ನಸ್ವಾಮಿ, ಉಮೇಶ್, ವೇಣುಗೋಪಾಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

