ಐವರ ದಾರುಣ ಸಾವು
ಕ.ಪ್ರ. ವಾರ್ತೆ ಗುಂಡ್ಲುಪೇಟೆ ಮಾ. 2
ಸಾರಿಗೆ ಸಂಸ್ಥೆಯ ಬಸ್ ಹಾಗೂ ಇಂಡಿಕಾ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ತಾಲೂಕಿನ ಊಟಿ-ಮೈಸೂರು ಹೆದ್ದಾರಿಯ ವೀರನಪುರದ ಬಳಿ ನಡೆದಿದೆ.
ತಾಲೂಕಿನ ಹಸಗೂಲಿ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದ ಉಮೇಶ್ ಎಂಬುವರ ಮಕ್ಕಳಾದ ಯಶ್ವಂತ್(3), ವೈಭವ್(2), ಉಮೇಶ್ ಅವರ ತಮ್ಮ ಅಶೋಕ್(34), ಅವರ ಪುತ್ರ ಸೋನು(4) ಹಾಗೂ ಬೋರಮ್ಮ(60) ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಕಾರಿನಲ್ಲಿದ್ದ ಅಶೋಕ್ ಅವರ ಪತ್ನಿ ನಳಿನಿ ಹಾಗು ಉಮೇಶ್ ಎಂಬವರ ಪತ್ನಿ ವಿಜಯ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪೊಲೀಸರು ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ವಿವರ: ಈ ಕುಟುಂಬ ತಮ್ಮ ಟಾಟಾ ಇಂಡಿಕಾದಲ್ಲಿ ಪಟ್ಟಣದ ಆಸ್ಪತ್ರೆಗೆ ತೆರಳಿ ಹಿಂದಿರುಗುತ್ತಿದ್ದಾಗ ಕಲ್ಲಿಕೋಟೆಗೆ ಹೋಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ 7 ಜನರಲ್ಲಿ ವೃದ್ಧೆ ಬೋರಮ್ಮ ಆಧಾರ್ ಕಾರ್ಡ್ ಮಾಡಿಸಲು ಬಂದಿದ್ದು, ತಮ್ಮ ಗ್ರಾಮಕ್ಕೆ ಕಾರು ಹೋಗುತ್ತದೆ ಎಂದು ತಿಳಿದು ಕೈ ಅಡ್ಡ ಹಾಕಿ ಹತ್ತಿದ್ದರು.
ಕಾರು ಚಲಾಯಿಸುತ್ತಿದ್ದ ಅಶೋಕ್ ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಉಳಿದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರವಾಗಿದೆ. ಅಪಘಾತದಲ್ಲಿ ಕಾರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದವರನ್ನು ಹೊರ ತೆಗೆಯಲು ಹರಸಾಹಸ ಪಟ್ಟ ಪೊಲೀಸರು ಕೊನೆಗೆ ಜೆಸಿಬಿ ಯಂತ್ರದ ಸಹಾಯದಿಂದ ಶವಗಳನ್ನು ಹೊರಗೆಳೆದರು. ಸಾರಿಗೆ ಸಂಸ್ಥೆ ಬಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಷಯ ತಿಳಿದ ಸುತ್ತಮುತ್ತಲಿನ ಗ್ರಾಮಸ್ಥರು ಜಾತ್ರೆಯಂತೆ ಧಾವಿಸಿ, ಮಮ್ಮಲ ಮರುಗಿದರು. ವೃತ್ತ ನಿರೀಕ್ಷಕ ಚನ್ನೇಶ್, ಉಪ-ನಿರೀಕ್ಷಕ ಎಂ.ನಾಯಕ್ ಹಾಗೂ ಸಾರ್ವಜನಿಕರು ಶವ ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಎಎಸ್ಪಿ ಚಂದ್ರಶೇಖರ್, ಡಿವೈಎಸ್ಪಿ ಮುತ್ತುಸ್ವಾಮಿ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

