ಕ್ರೀಡೆಗೆ ಆದ್ಯತೆ ನೀಡಿ: ಚಂದ್ರೇಗೌಡ
ಚಾಮರಾಜನಗರ: ವಿದ್ಯಾಭ್ಯಾಸದ ಜೊತೆ ಕ್ರೀಡೆಗೂ ಪ್ರಾಮುಖ್ಯತೆ ನೀಡುವ ಗುರುತರ ಹೊಣೆ ವಿದ್ಯಾರ್ಥಿಗಳ ಮೇಲಿದೆ ಎಂದು ಡಿಡಿಪಿಐ ಡಾ. ಎನ್.ಚಂದ್ರೇಗೌಡ ತಿಳಿಸಿದರು.
ಅವರು ರಾಮಸಮುದ್ರ ಸಿ.ಆರ್. ಬಾಲರಪಟ್ಟಣ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಖೋಖೋ ಪಂದ್ಯಾವಳಿಯ 2 ದಿನದ ರೆಫರಿ ಪರೀಕ್ಷಾ ಸಮಾರಂಭದಲ್ಲಿ ಮಾತನಾಡಿದರು.
ಗ್ರಾಮೀಣ ಕ್ರೀಡೆಗಳನ್ನು ದೈಹಿಕ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಸಿಕೊಡಬೇಕು. ದಿನನಿತ್ಯ ನೀಲನಕ್ಷೆ ತಯಾರಿಸಿಕೊಂಡು ಯೋಗ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ಈಜು, ಪ್ರಥಮ ಚಿಕಿತ್ಸೆ, ಆಕಸ್ಮಿಕ ಅವಘಡಗಳಾದಾಗ ವಿದ್ಯಾರ್ಥಿಗಳು ಹೇಗೆ ಕಾರ್ಯಶೀಲರಾಗಬೇಕು ಎಂಬುದರ ಬಗ್ಗೆ ದೈಹಿಕ ಶಿಕ್ಷಕರು ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಬೇಕು ಎಂದರು.
ಬಾಲರಪಟ್ಟಣ ಪ್ರೌಢಶಾಲೆಯ ಮುಖ್ಯಶಿಕ್ಷಕ ಸುಜಯಕುಮಾರ್ ಮಾತನಾಡಿ, 20 ವರ್ಷದಿಂದ ಹಲವು ಪ್ರಶಸ್ತಿಗಳು ನಮ್ಮ ಶಾಲೆಗೆ ಲಭಿಸಿವೆ. ನಶಿಸಿ ಹೋಗುತ್ತಿರುವ ಪ್ರಾಚೀನ ಕಲೆ, ಸಂಸ್ಕೃತಿ, ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎನ್. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ನಿಂಗೇಗೌಡ, ಸರ್ಕಾರಿ ಬಾಲಕರ ಪಪೂ ಕಾಲೇಜಿನ ಉಪಪ್ರಾಂಶುಪಾಲ ರಾಚಯ್ಯ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚೆನ್ನಂಜಯ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಪ್ರಭುಸ್ವಾಮಿ, ಕಾರ್ಯದರ್ಶಿ ಮಹದೇವಸ್ವಾಮಿ, ಪ್ರೌಢಶಾಲೆ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಉಮಾಶಂಕರ್, ದೈಹಿಕ ಶಿಕ್ಷಕರಾದ ಜೋಸೆಫ್, ಬಂಗಾರಗಿರಿನಾಯಕ, ಚಿಕ್ಕಬಸವಯ್ಯ, ಸಿಆರ್ಪಿ ಕೆ.ಆರ್. ಮಲ್ಲಿಕಾರ್ಜುನಯ್ಯ, ಕೆ.ಎಸ್.ಮುಕುಂದ, ನಾಗಣ್ಣ, ಜಿಲ್ಲೆಯ ಎಲ್ಲ ದೈಹಿಕ ಶಿಕ್ಷಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

