ಚಾಮರಾಜನಗರ

ಮತದಾರರು 'ಕೈ' ಹಿಡಿಯುತ್ತಾರೆ: ಧ್ರುವ

Published On :

ಕೊಳ್ಳೇಗಾಲ: ನಗರಸಭೆ ಚುನಾವಣೆಯಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಗಳಿಸಿ ಗೆಲವು ಸಾಧಿಸಲಿದೆ ಎಂದು ಸಂಸದ ಆರ್.ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಾಪುನಗರ ಹಾಗೂ ಮುಡಿಗುಂಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನವಣಾ ಪ್ರಚಾರಸಭೆಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಹಲವು ಭಾಗವಾಗಿ ಛಿದ್ರಗೊಂಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪಕ್ಷದ ಅಭ್ಯರ್ಥಿಗಳನ್ನು ಮತದಾರರು ಕೈಹಿಡಿಯಲಿದ್ದಾರೆ ಎಂದರು.
ತಾವು ಶಾಸಕರಾಗಿದ್ದ ಅವಧಿಯಲ್ಲಿ ಕೈಗೊಂಡ 1 ಕೋಟಿ ಅಂದಾಜಿನ ಗಡಿಭವನ, ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು.  
28ನೇ ವಾರ್ಡ್‌ನಲ್ಲಿ ಇತರೆ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ನಿಲ್ಲಿಸದೆ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಪಣತೊಟ್ಟಿರುವುದನ್ನು ಗಮನಿಸಿದರೆ ನಮ್ಮ ಅಭ್ಯರ್ಥಿ ಶಕ್ತಿಶಾಲಿಯಾಗಿದ್ದಾರೆ ಎಂದು ತಿಳಿಯಲಿದೆ. ಒಬ್ಬ ಅಭ್ಯರ್ಥಿ ಸೋಲಿಗೆ ಬಿಜೆಪಿ, ಬಿಎಸ್ಪಿ ಅಭ್ಯರ್ಥಿ ಜಂಟಿ ಪ್ರಚಾರ ನಡೆಸುತ್ತಿರುವುದು ಹಾಗೂ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ನಿಲ್ಲಿಸದಿರುವುದು ಹಾಸ್ಯಾಸ್ಪದ ಎಂದರು.
30 ವಾರ್ಡ್‌ಗಳ ಅಭ್ಯರ್ಥಿಗಳ ಪರ ವಿವಿಧೆಡೆ ಧ್ರುವನಾರಾಯಣ ಪ್ರಚಾರ ಸಭೆ ನಡೆಸಿದರು.
ಮಾಜಿ ಶಾಸಕ ಎಸ್.ಜಯಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ, ಜಿಪಂ ಸದಸ್ಯ ಕೊಪ್ಪಾಳಿ ಮಹದೇವನಾಯಕ, ಮುಡಿಗುಂಡ ಶಾಂತರಾಜು, ಮಾಂಬಳ್ಳಿ ನಂಜುಂಡಸ್ವಾಮಿ, ಮುಕುಂದವರ್ಮ,  ಬಾಪುನಗರ ಸಿದ್ದಪ್ಪಾಜಿ, ಜಿ.ಎಂ.ಸುರೇಶ, ಎಂ.ಸುರೇಶ, ಸೇರಿದಂತೆ ಹಲವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.