ಚಾಮರಾಜನಗರ

ಇಂದು ಮಾಧ್ಯಮ ಪ್ರಶಸ್ತಿ ಪ್ರದಾನ

Published On :

ಚಾಮರಾಜನಗರ: 28 ವರ್ಷದಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ನಗರದ ಹಿರಿಯ ಪತ್ರಕರ್ತ ಎಚ್.ವಿ.ಸತ್ಯನಾರಾಯಣ್ ಅವರಿಗೆ ಜೆಎಸ್‌ಎಸ್ ಮಹಾವಿದ್ಯಾಪೀಠ ಕೊಡಲ್ಪಡುವ 2012ನೇ ಮಾಧ್ಯಮ ಪ್ರಶಸ್ತಿ ಲಭಿಸಿದೆ. ಮೈಸೂರಿನ ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜು ಸಭಾಂಗಣದಲ್ಲಿ ಮಾ.26ರ ಮಂಗಳವಾರ ಬೆಳಗ್ಗೆ 10-30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಸಾನಿಧ್ಯ ವಹಿಸಲಿದ್ದು, ಪ್ರಶಸ್ತಿಯು 10 ಸಾವಿರ ನಗದು, ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.
ನಾಳೆ ವಾಟಾಳ್ ಸೈಕಲ್ ಸವಾರಿ
ಚಾಮರಾಜನಗರ: ನಗರಕ್ಕೆ ಕಾಯಂ ಕುಡಿಯುವ ನೀರು ತಂದು ಕೊಟ್ಟಿದ್ದರೂ ಅದರ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದನ್ನು ವಿರೋಧಿಸಿ ಮಾ.27ರಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ಸೈಕಲ್ ಸವಾರಿ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಚಾಮರಾಜೇಶ್ವರ ದೇವಸ್ಥಾನದಿಂದ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸಂಪೂರ್ಣ ಕಪ್ಪು ಉಡುಪು ಧರಿಸಿ ಸೈಕಲ್ ಪ್ರಕಟಣೆ ತಿಳಿಸಿದೆ.
30ರಂದು ಜಿಲ್ಲೆಗೆ ಶರಣ ಯಾತ್ರೆ  
ಚಾಮರಾಜನಗರ: ಬಸವ ಜಯಂತಿ ಶತಮಾನೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವ ಸಮಿತಿ, ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಾಡಿನಾದ್ಯಂತ ಕೈಗೊಂಡಿರುವ ಶರಣ ಸಂಸ್ಕೃತಿ ಮಹಾಯಾತ್ರೆಯು ಮಾ.30ರಂದು ಜಿಲ್ಲೆಯಲ್ಲಿ ಸಂಚರಿಸಲಿದೆ. ನಂತರ ಜಿಲ್ಲೆಯ 4 ತಾಲೂಕುಗಳಲ್ಲೂ ಸಂಚರಿಸಲಿದ್ದು, ಆಯಾ ತಾಲೂಕಿನ ಶರಣಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಮಹಾಯಾತ್ರೆಯನ್ನು ಸ್ವಾಗತಿಸಬೇಕೆಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಆರ್. ಪುಟ್ಟಮಲ್ಲಪ್ಪ ಕೋರಿದ್ದಾರೆ.
ನಾಳೆ ರಕ್ತದಾನ ಶಿಬಿರ
ಚಾಮರಾಜನಗರ: ನಗರದಲ್ಲಿರುವ ಮೈಸೂರು ವಿವಿ ಸ್ನಾತಕೋತ್ತರ ಉಪಗ್ರಹ ಕೇಂದ್ರ, ರೆಡ್‌ಕ್ರಾಸ್ ಸಂಸ್ಥೆ ಹಾಗೂ ಸರ್ಕಾರಿ ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಮಾ.27ರಂದು ನಗರದ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಕಳಕಳಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ನೆರವಿಗೋಸ್ಕರ ಸ್ನಾತಕೋತ್ತರ ಉಪಗ್ರಹ ಕೇಂದ್ರದ ಎಂಎಸ್‌ಡಬ್ಲ್ಯೂ ವಿಭಾಗದ ವಿದ್ಯಾರ್ಥಿಗಳ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಸ್ನಾತಕೋತ್ತರ ಉಪಗ್ರಹ ಕೇಂದ್ರದ ಸಂಯೋಜನಾಧಿಕಾರಿ ಪ್ರೊ. ಶಿವಬಸವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.