ಕೆನರಾ ಬ್ಯಾಂಕ್ ಬೇಜವಾಬ್ದಾರಿ: ಕರವೇ ಪ್ರತಿಭಟನೆ
ಕ.ಪ್ರ.ವಾರ್ತೆ ಯಳಂದೂರು ಮಾ.25
ಕೆನರಾ ಬ್ಯಾಂಕ್ನಲ್ಲಿ ಸಾರ್ವಜನಿಕರಿಗೆ ವಹಿವಾಟು ನಡೆಸಲು ಮತ್ತು ಠೇವಣಿ ಇಡಲು ಉಳಿತಾಯ ಖಾತೆ ತೆರೆಯಲು ಸಾರ್ವಜನಿಕರಿಗೆ ಬ್ಯಾಂಕಿನ ವ್ಯವಸ್ಥಾಪಕರು ಅನುಕೂಲ ಮಾಡಿಕೊಡುತ್ತಿಲ್ಲ ಎಂದು ಕರವೇ ಕಾರ್ಯಕರ್ತರು ಬ್ಯಾಂಕ್ಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದ್ದರು.
ಪಟ್ಟಣ ಹೊರ ವಲಯದಲ್ಲಿರುವ ನಾಡಮೇಗಲಮ್ಮ ದೇವಾಲಯದಿಂದ ಕರವೇ ಕಾರ್ಯಕರ್ತರು ಮೆರವಣಿಗೆ ಹೊರಟು ಪಟ್ಟಣದ ಬಸ್ ನಿಲ್ದಾಣ, ಅಂಗಡಿ ಬೀದಿ, ಬಳೇಪೇಟೆ ಸೇರಿದಂತೆ ಪ್ರಮುಖ ಬೀದಿಗಳ ಮೂಲಕ ಸಾಗಿ ನಂತರ ಕೆನರಾ ಬ್ಯಾಂಕ್ಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಮಧ್ಯ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಿಕೊಡುವುದಾಗಿ ಮನವಿ ಮಾಡಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರವೇ ಸಂಘದ ಅಧ್ಯಕ್ಷ ಚಂದ್ರಮೌಳಿ ಮಾತನಾಡಿ, ಬ್ಯಾಂಕ್ನಲ್ಲಿ ಉಳಿತಾಯ ಖಾತೆ ತೆರೆಯಲು ಬರುವ ಗ್ರಾಹಕರ ಜೊತೆಯಲ್ಲಿ ವ್ಯವಸ್ಥಾಪಕರು ಅಸಭ್ಯ ರೀತಿಯಲ್ಲಿ ನಡೆದುಕೊಳ್ಳುವುದರ ಜೊತೆಗೆ ನಮ್ಮ ಬ್ಯಾಂಕ್ನಲ್ಲಿ ಖಾತೆ ತೆರೆಯಲು ಸಾಧ್ಯವಿಲ್ಲ ಎಂಬ ಉಡಾಫೆ ಉತ್ತರ ನೀಡಿ ಸಾರ್ವಜನಿಕರ ಘನತೆಗೆ ಚ್ಯುತಿಯಾಗುವ ರೀತಿ ಮಾತನಾಡುತ್ತಾರೆ ಎಂದು ಆರೋಪಿಸಿದರು.
ಸ್ಥಳಕ್ಕೆ ಆಗಮಿಸಿದ್ದ ಕೆನರಾ ಬ್ಯಾಂಕ್ ವ್ಯವಸ್ಥಾಪಕರು ಮಾತನಾಡಿ, ನಮ್ಮ ಬ್ಯಾಂಕ್ನಲ್ಲಿ ಸಿಬ್ಬಂದಿ ಕೊರತೆ ಇದೆ. ಅಲ್ಲದೆ ಸರಿಯಾದ ಸಮಯಕ್ಕೆ ವಿದ್ಯುತ್ ಬಾರದ ಕಾರಣ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇನ್ನು ಮುಂದೆ ಸಾರ್ವಜನಿಕರಿಗೆ ಖಾತೆ ತೆರೆಯಲು ಅನುಕೂಲ ಕಲ್ಪಿಸುವುದಾಗಿ ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.
ಮುಖಂಡರಾದ ಶಿವಣ್ಣ, ಖಲೀಲ್ ಪಾಷ, ಪ್ರಭು, ಪ್ರಕಾಶ್, ಮೋಹನ್, ಶ್ರೀನಿವಾಸ್, ಸಿದ್ದರಾಜು, ಉಮೇಶ್, ಮಹೇಶ್, ಗುರುಪ್ರಸಾದ್, ಪ್ರಕಾಶ್, ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

