ಚಾಮರಾಜನಗರ

ನೀತಿ ಸಂಹಿತೆ ಪಾಲನೆ ಕಡ್ಡಾಯ

Published On :

ಚಾಮರಾಜನಗರ: ಹಾಲಿ ಜಾರಿಯಲ್ಲಿರುವ ಚುನಾವಣಾ ನೀತಿ ಸಂಹಿತೆಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಕ್ತ, ನ್ಯಾಯಯುತ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಯಲು ಚುನಾವಣಾ ಆಯೋಗವು ಸೂಚಿಸಿರುವ ಅನುಸಾರ ನೀತಿ ಸಂಹಿತೆ ಪಾಲನೆ ಮಾಡಬೇಕು. ಯಾವುದೇ ಪಕ್ಷ, ಅಭ್ಯರ್ಥಿ, ಜಾತಿ, ಸಮುದಾಯ ಅಥವಾ ಭಾಷಾ ಸಮೂಹಗಳ ಮಧ್ಯೆಯಿರುವ ಭಿನ್ನಾಭಿಪ್ರಾಯ ಕೆರಳಿಸುವ, ದ್ವೇಷ ಹುಟ್ಟಿಸುವ ಚಟುವಟಿಕೆಗಳಲ್ಲಿ ತೊಡಗುವುದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್, ಭಿತ್ತಿಪತ್ರ ಹಾಕಬಾರದು. ಖಾಸಗಿಯವರಿಗೆ ಸೇರಿದ ಭೂಮಿ, ಕಟ್ಟಡದ ಮೇಲೆ ಪ್ರದರ್ಶಿಸಲು ಸಹ ಅನುಮತಿ ಪಡೆಯಬೇಕು. ಪ್ರಕಟಣಾ ಪತ್ರ, ಸುತ್ತೋಲೆ, ಜಾಹೀರಾತುಗಳಲ್ಲಿ ಮುದ್ರಕರು ಮತ್ತು ಪ್ರಕಟಿಸುವವರ ಹೆಸರು, ವಿಳಾಸ ನಮೂದಿಸಬೇಕು. ಧ್ವನಿವರ್ಧಕಗಳ ಬಳಕೆಗೆ ಪರವಾನಗಿ ಪಡೆಯಬೇಕು ಎಂದರು.
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಸಭೆ ನಡೆಯುವ ಸ್ಥಳ ಹಾಗೂ ವೇಳೆಯನ್ನು ಪೊಲೀಸ್ ಅಧಿಕಾರಿಗಳಿಗೆ ಆದಷ್ಟೂ ಮುಂಚಿತವಾಗಿ ಮಾಹಿತಿ ನೀಡಿ ಅನುಮತಿ ಪಡೆಯಬೇಕು. ಮೆರವಣಿಗೆ ನಡೆಸಬೇಕಾದ ಸಂದರ್ಭವಿದ್ದಲ್ಲಿ ಹಾದುಹೋಗುವ ಮಾರ್ಗಗಳ ಬಗ್ಗೆ ನಿರ್ಧರಿಸಿ ಮಾಹಿತಿ ನೀಡಬೇಕು. ಸಂಚಾರ ನಿಯಮ ನಿರ್ಬಂಧ ಆಜ್ಞೆಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದೆ ಸಂದರ್ಭದಲ್ಲಋ ಹಣಕಾಸು ವೆಚ್ಚದ ವಿವರದ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಎಸ್‌ಪಿ ರಾಜೇಂದ್ರ ಪ್ರಸಾದ್, ಹೆಚ್ಚುವರಿ ಡಿಸಿ ಭಾರತಿ, ಸತೀಶ್‌ಬಾಬು ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.