ವಿದ್ಯಾರ್ಥಿ ನಿಲಯಕ್ಕೆ ಶಂಕುಸ್ಥಾಪನೆ

Updated on: 

ಚಾಮರಾಜನಗರ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅವರಣದಲ್ಲಿ ರು.1ಕೋಟಿ  ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಗುದ್ದಲಿಪೂಜೆ ನೆರವೇರಿಸಿದರು.
ಪರಿಶಿಷ್ಟ ಜಾತಿ ಹಾಗೂ ವರ್ಗಗಳ ವಿಶೇಷ  ಘಟಕ ಯೋಜನೆಯಡಿಯಲ್ಲಿ ಕೆಆರ್‌ಐಡಿಎಲ್‌ನಿಂದ ಕಟ್ಟಡ ನಿರ್ಮಿಸಲಾಗುತ್ತಿದೆ. ಈಗಾಗಲೇ ಪಾಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಇದೆ. ಆದರೆ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ದೇಶಪಾಂಡೆ, ಪಕ್ಕದಲ್ಲೇ ಇದ್ದ ವಿದ್ಯಾರ್ಥಿಗಳ ಹಾಸ್ಟಲ್‌ಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಹಾಸ್ಟೆಲ್ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. ನೆಲ ಹಂತಸ್ತು ಸಂಪೂರ್ಣ ಕುಸಿದಿರುವುದನ್ನು ಗಮನಿಸಿದರು. ಕಾಲೇಜು ಕಟ್ಟಡದ ನೆಲ ಹಂತಸ್ತು ಕುಸಿದಿರುವ ಬಗ್ಗೆ ಸಂಸದ ಧ್ರುವನಾರಾಯಣ ಸಚಿವರ ಗಮನ ಸೆಳೆದರು. ತಕ್ಷಣ ಸ್ಥಳದಲ್ಲಿದ್ದ ತಾಂತ್ರಿಕ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿ ಒಂದು ಕೋಟಿ ಹೆಚ್ಚುವರಿ ಹಣ ಪಡೆದು ಕ್ರಿಯಾ ಯೋಜನೆ ರೂಪಿಸಿ, ಕಟ್ಟಡ ದುರಸ್ತಿ ಪಡಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್, ಸಂಸದ ಧ್ರುವನಾರಾಯಣ, ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಪಂ ಅಧ್ಯಕ್ಷ ಡಿ.ಸಿ.ನಾಗೇಂದ್ರ, ನಗರಸಭೆ ಅಧ್ಯಕ್ಷನಂಜುಂಡಸ್ವಾಮಿ, ತಾಪಂ ಅಧ್ಯಕ್ಷೆ ಶಶಿಕಲಾ, ಜಿಪಂ ಸದಸ್ಯ ಬಿ.ಪಿ. ಪುಟ್ಟಬುದ್ದಿ, ನಗರಸಭಾ ಸದಸ್ಯೆ ರೇಣುಕಾ, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ತಳವಾರ್,  ಕೆಆರ್‌ಡಿಎಲ್ ಎಂಜಿನಿಯರ್ ಪುಟ್ಟರಾಜು, ಪ್ರಾಂಶುಪಾಲೆ ಮಂಜುಳಾ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com