ಚಾಮರಾಜನಗರ: ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಜನಾಂಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಕ್ಕರು, ಆಂಗ್ಲೋ ಇಂಡಿಯನ್ ಮತ್ತು ಪಾರ್ಸಿ ಜನಾಂಗದ ಕಾನೂನು ಪದವೀಧರರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಸೀಲ್ದಾರ್ ಅವರಿಂದ ಪಡೆದ ಜಾತಿ ಆದಾಯ ದೃಢೀಕರಣ ಪ್ರಮಾಣ ಪತ್ರ, ಕಾನೂನು ಪದವಿ ಅಂಕಪಟ್ಟಿ, ಪದವಿ ಪತ್ರ, ಬಾರ್ ಕೌನ್ಸ್ಲ್ ನೋಂದಣಿ ಪತ್ರದ ದೃಢೀಕರಣ ಪತ್ರಗಳನ್ನು ದೃಢೀಕರಿಸಿ, 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಆ.30ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿಗೆ ತಲುಪಿಸುವಂತೆ ತಿಳಿಸಿದ್ದಾರೆ.
Advertisement