ಚಾಮರಾಜನಗರ: ವಿದ್ಯಾರ್ಥಿಗಳು ಎಲ್ಲ ಜಾತಿ, ಧರ್ಮಗಳ ಸಂಕೋಲೆಯಿಂದ ಹೊರಬಂದು ಸಾಹಿತ್ಯ, ಸಂಸ್ಕೃತಿ ಚಿಂತಕರಾಗಬೇಕು ಎಂದು ಮಲೆಯೂರು ಗುರುಸ್ವಾಮಿ ಹೇಳಿದರು.ತಾಲೂಕಿನ ಅರಕಲವಾಡಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಸೋಮಶೇಖರ ಬಿಸಲವಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಎ.ಎಂ ನಾಗಮಲ್ಲಪ್ಪ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿದ್ಧಮಲ್ಲಪ್ಪ ಮಾತನಾಡಿದರು. ಪ್ರಾಂಶುಪಾಲ ಮಹದೇವಯ್ಯ ಅಧ್ಯಕ್ಷತೆ ವಹಿಸಿದ್ದರು. ಹರದನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ನಟರಾಜು ಪ್ರಾಸ್ತವಿಕ ನುಡಿಗಳನ್ನಾಡಿದರು. ಕಲಾವಿದ ಬಿ.ಬಸವರಾಜು ಗೀತೆಗಳನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು. ಗ್ರಾಪಂ ಅಧ್ಯಕ್ಷೆ ಮಂಜುಳ, ಉಪನ್ಯಾಸಕ ಸದಾನಂದ ಹಾಗೂ ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಅಕ್ರಮ ಮರಳು: ಟ್ರ್ಯಾಕ್ಟರ್ ವಶ
ಯಳಂದೂರು: ಸುವರ್ಣಾವತಿ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿ ಕಳ್ಳ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ನ್ನು ಉಪ ವಿಭಾಗಾಧಿಕಾರಿ ಸತೀಶ್ಬಾಬು ಯರಿಯೂರು ಗ್ರಾಮದ ಬಳಿ ಹಿಡಿದು, ಅಕ್ರಮ ಮರಳು ಸಾಗಣೆ ಮಾಡುತ್ತಿರುವ ಪ್ರಕರಣ ದಾಖಲಿಸುವಂತೆ ಸೂಚಿಸಿದರು. ಮರಳು ತುಂಬಿರುವ ಟ್ರಾಕ್ಟರ್ನ್ನು ಚಾಲಕ ಬಿಟ್ಟು ಓಡಿ ಹೋಗಿದ್ದರಿಂದ, ಬೇರೊಬ್ಬನ ಚಾಲಕನ ಸಹಾಯದಿಂದ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿ ಪ್ರಕರಣ ದಾಖಲಿಸಲಾಯಿತು.
Advertisement