ಚಾಮರಾಜನಗರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ವತಿಯಿಂದ ವಿಶ್ವ ಜನಸಂಖ್ಯಾ ದಿನ ಆಚರಣೆ ಕಾರ್ಯಕ್ರಮವನ್ನು ಜು. 11ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಗೆ ಸರ್ಕಾರಿ ಪ್ರವಾಸಿ ಮಂದಿರದಿಂದ ಜಿಲ್ಲಾಡಳಿತ ಭವನದವರೆಗೆ ಬೃಹತ್ ಜಾಥಾ ಏರ್ಪಡಿಸಲಾಗಿದೆ. 11 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.