ಚಿಕ್ಕಮಗಳೂರು

ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿ

Published On :

ಕನ್ನಡಪ್ರಭ ವಾರ್ತೆ ಸಾಗರ ಏ.1
ಈ ಬಾರಿ ಜೆಡಿ(ಎಸ್) ಅಧಿಕಾರ ಹಿಡಿಯುವುದು ನಿಶ್ಚಿತವಾಗಿದ್ದು ಕಾರ್ಯಕರ್ತರು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೀಡಿರುವ ಜನಕಲ್ಯಾಣ ಯೋಜನೆ ಕುರಿತು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಜೆಡಿ(ಎಸ್) ರಾಜ್ಯ ಪ್ರಧಾನ ಕಾರ್ಯದರ್ಶಿ ಚಾಬೂಸಾಬ್ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಾತ್ಯಾತೀತ ಜನತಾದಳದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ 5 ಕ್ಷೇತ್ರಗಳಲ್ಲಿ ಪಕ್ಷವು ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿಕಾರಿಪುರ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವು ಅಚ್ಚರಿಯ ರೀತಿಯಲ್ಲಿ ಗೆಲವು ಸಾಧಿಸಲಿದೆ ಎಂದ ಅವರು, ಈಗಾಗಲೇ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇನ್ನು ಎರಡು ದಿನದಲ್ಲಿ ಹೆಸರು ಘೋಷಣೆ ಮಾಡಲಾಗುವುದು. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗದೆ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.
ಪಕ್ಷದ ತಾಲೂಕು ಘಟಕದ ಕಾರ್ಯಾಧ್ಯಕ್ಷ ಬಸವರಾಜ ಗೌಡ ಬೈದೂರು ಅಧ್ಯಕ್ಷತೆ ವಹಿಸಿದ್ದರು. ಯುವ ಘಟಕದ ಅಧ್ಯಕ್ಷ ಉಮೇಶ್, ಪ್ರಮುಖರಾದ ಚೌಡಪ್ಪ, ವಿ.ಜಿ. ಮನೋಹರ, ಕನ್ನಪ್ಪ ಬೆಳಲಮಕ್ಕಿ, ಮಂಜುನಾಥ್, ಅಣ್ಣಪ್ಪ ಎಚ್.ಕೆ., ಈಶ್ವರಪ್ಪ ಹಾಜರಿದ್ದರು.
ಕಾರ್ಯಕರ್ತರ ಆಕ್ರೋಶ: ಉದ್ಘಾಟನಾ ಭಾಷಣ ಮಾಡುತ್ತಿದ್ದ ವೇಳೆ ಕೆಲವು ಕಾರ್ಯಕರ್ತರು ಪಕ್ಷದ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಪಕ್ಷ ಸಂಘಟನೆಗೆ ಜಿಲ್ಲೆ ಹಾಗೂ ರಾಜ್ಯದ ವರಿಷ್ಠರು ಹೆಚ್ಚು ಗಮನ ನೀಡುತ್ತಿಲ್ಲ. ಕಳೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುಖಂಡರ ನಡುವಿನ ಗೊಂದಲದಿಂದ ಪಕ್ಷವು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿಲ್ಲ. ಪಕ್ಷವಿರೋಧಿ ಚಟುವಟಿಕೆ ಮಾಡುತ್ತಿರುವವರನ್ನು ಮೊದಲು ಪಕ್ಷದಿಂದ ಕಿತ್ತು ಹಾಕಿ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.