ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ 2011-12ನೇ ಸಾಲಿನಲ್ಲಿ ಬಿ.ಎ, ಬಿ.ಕಾಂ, ಎಂ.ಎ, ಎಂ.ಕಾಂ, ಬಿ.ಎಡ್ ತರಗತಿಗಳಲ್ಲಿ ಮೊದಲನೇ ಪ್ರಯತ್ನದಲ್ಲಿ ಶೇ. 50 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಕ್ತ ಸಂಜೀವಿನಿ ವಿದ್ಯಾರ್ಥಿ ವೇತನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏ. 6 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಪ್ರಾದೇಶಿಕ ಕೇಂದ್ರ, ಎ.ಐ.ಟಿ. ಕ್ಯಾಂಪಸ್, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ರಿಯಾಯಿತಿ ಬಸ್ ಪಾಸ್ ನವೀಕರಣ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ವಿಕಲಚೇತನರಿಗೆ ಪ್ರಸ್ತುತ ಸಾಲಿಗೆ ರಿಯಾಯಿತಿ ದರದ ಬಸ್ ಪಾಸ್‌ಗಳನ್ನು ನವೀಕರಿಸಿ ಕೊಡಲಾಗುವುದು. ಜಿಲ್ಲಾ ವಿಭಾಗದ ಮುಖ್ಯ ವಾಹನ ನಿಲ್ದಾಣಗಳಲ್ಲಿ ಪಾಸ್‌ಗಳನ್ನು ನವೀಕರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅರ್ಹ ಅಭ್ಯರ್ಥಿಗಳು ಏ. 30ರೊಳಗೆ ಪೂರಕ ದಾಖಲೆಗಳೊಂದಿಗೆ 550 ನಗದು ಪಾವತಿ ಮಾಡಿ ಪಾಸ್‌ಗಳನ್ನು ನವೀಕರಿಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ತಪಾಸಣಾ ಶಿಬಿರ
ಕೊಪ್ಪ: ತಾಲೂಕಿನ ನಾರ್ವೆ ಸರ್ಕಾರಿ ಶಾಲೆ ಆವರಣದಲ್ಲಿ ಸರ್ಕಾರಿ ಅಯುಷ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆಯುರ್ವೇದ ತಪಾಸಣಾ ಶಿಬಿರದಲ್ಲಿ 100ಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಲಾಯಿತು ಎಂದು ವೈದ್ಯ ಡಾ ಗಣೇಶ್ ಭಟ್ ತಿಳಿಸಿದ್ದಾರೆ. ಶಿಬಿರದಲ್ಲಿ ಡಾ. ನಳಿನಿ ಭಾಗವಹಿಸಿದ್ದಾರು. ಅನಿಲ್ ಕಲ್ಮಕ್ಕಿ ಶಿಬಿರದ ಉದ್ಘಾಟನೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

