4 ರಂದು ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು: ಚಿಕ್ಕಮಗಳೂರು ವಿ.ವಿ ಕೇಂದ್ರದ ಮಾರ್ಗದಲ್ಲಿ ತಾಮ್ರದ ವಾಹಕವನ್ನು ಕಳಚುವ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ವಿ.ವಿ. ಕೇಂದ್ರದಿಂದ ಹೊರಡುವ ಉದ್ದೇಬೋರನಹಳ್ಳಿ, ಲಕ್ಯಾ, ಹುಡ್ಕೋ, ಕೆಂಪನಹಳ್ಳಿ ಫೀಡ್ಗಳಿಂದ ಹೊರಹೊಮ್ಮುವ ಎಲ್ಲಾ ಪ್ರದೇಶಗಳಲ್ಲಿ ಏ. 4 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮತದಾನ ಅರಿವು ಕಾರ್ಯಕ್ರಮ
ಕಡೂರು: ಇತ್ತೀಚಿನ ಚುನಾವಣೆಗಳಲ್ಲಿ ಶೇಕಡವಾರು ಮತದಾನದ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚು ಹೆಚ್ಚಾಗಿ ಪಾಲ್ಗೊಳ್ಳುವಂತೆ ಮಾಡಿ ಮತದಾನದ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಏ. 3 ರಂದು ಕಡೂರು ಪಟ್ಟಣದಲ್ಲಿ ಜಾಗೃತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. 127ನೇ ಕಡೂರು ವಿಧಾನಸಭಾ ಕ್ಷೇತ್ರ ಕಡೂರು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿ ಲಕ್ಷ್ಮೀನರಸಯ್ಯ, ಸಹಾಯಕ ಚುನಾವಣಾಧಿಕಾರಿ ಲಕ್ಷ್ಮಣಪ್ಪ, ನೋಡಲ್ ಅಧಿಕಾರಿ ಸುರೇಶ್ ಗೌಡ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅಧಿಕಾರಿಗಳು, ಏ. 3 ರಂದು ಬೆಳಿಗ್ಗೆ ತಾಲೂಕು ಕಚೇರಿಯ ಆವರಣದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಶಿಬಿರದ ಮೆರವಣಿಗೆ ನಡೆಸುವ ಮೂಲಕ ಅನ್ನಪೂರ್ಣ ಚಿತ್ರಮಂದಿರದಲ್ಲಿ ಜಾಗೃತ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಚುನಾವಣಾ ಶಾಖೆಯ ಅಧಿಕಾರಿ ಸಿಬ್ಬಂದಿಗಳು,ಕಂದಾಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

