ಚಿಕ್ಕಮಗಳೂರು

ಎಸ್ಸೆಸ್ಸೆಸಿ ಪರೀಕ್ಷೆ: 21 ವಿದ್ಯಾರ್ಥಿಗಳು ಗೈರು

Published On :

ಕ.ಪ್ರ ವಾರ್ತೆ, ನರಸಿಂಹರಾಜಪುರ, ಏ.1
ತಾಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೋಮವಾರ ಪ್ರಾರಂಭಗೊಂಡಿದ್ದು 1068 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ನರಸಿಂಹರಾಜಪುರ ಸರ್ಕಾರಿ ಜೂನಿಯರ್ ಕಾಲೇಜು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪರೀಕ್ಷಾ ಕೇಂದ್ರ, ಬಾಳೆಹೊನ್ನೂರಿನ ಎಸ್‌ಜೆಎಸ್‌ಆರ್‌ಜೆಸಿ ಪರೀಕ್ಷಾ ಕೇಂದ್ರ ಹಾಗೂ ಬಾಳೆಹೊನ್ನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 1089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ, 21 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರಿಂದ 1068 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದಾರೆ.
ಮುಖ್ಯೋಪಾಧ್ಯಾಯರ ನೇತೃತ್ವದಲ್ಲಿ 4 ಸ್ಥಾನಿಕ ಜಾಗೃತದಳ, ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ, ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ತಾಲೂಕು ಜಾಗೃತದಳವು ಪರೀಕ್ಷೆ ಸುಗಮವಾಗಿ ನಡೆಯುವಂತೆ ಕಾರ್ಯನಿರ್ವಹಿಸುತ್ತಿದೆ. ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದೆ  ಎಸ್‌ಎಲ್‌ಎಲ್‌ಸಿ ಪರೀಕ್ಷೆ ಶಾಂತಿಯುತವಾಗಿ ನಡೆಯಿತು.
ತರಿಕೆರೆಯಲ್ಲಿ..
ತರೀಕೆರೆ: ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಸಿ ಪರೀಕ್ಷೆಗೆ 2514 ವಿದ್ಯಾರ್ಥಿಗಳು ಕುಳಿತಿದ್ದು ಅದರಲ್ಲಿ 1172 ಹೆಣ್ಣು  ಮಕ್ಕಳು ಮತ್ತು 1342 ಗಂಡು ಮಕ್ಕಳು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ,.ಆರ್. ಪರಮೇಶ್ವರಪ್ಪ  ತಿಳಿಸಿದ್ದಾರೆ. ತಾಲೂಕಿನ ಒಟ್ಟು 42 ಶಾಲೆಗಳಿಂದ 13 ಕೇಂದ್ರಗಳಲ್ಲಿ ಪರೀಕ್ಷೆ ಢಡೆಯುತ್ತಿದೆ,  ಜಿಲ್ಲಾ, ತಾಲೂಕು ಸಿಟ್ಟಿಂಗ್ ಸ್ಕ್ವಾಡ್ಸ್‌ಗಳ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.