ಚಿಕ್ಕಮಗಳೂರು

ನಾಳೆ ನೂತನ ವಸತಿಗೃಹ ಆರಂಭ

Published On :

ಚಿಕ್ಕಮಗಳೂರು: ನಗರದ ಬಸವನಹಳ್ಳಿಯ ನರಸಿಂಗರಾವ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ದಿ ಗ್ರ್ಯಾಂಡ್ ಕೃಷ್ಣ  ಐಷಾರಾಮಿ ವಸತಿಗೃಹ ಏ.4ರಂದು ಸಂಜೆ 6 ಗಂಟೆಗೆ ಆರಂಭಗೊಳ್ಳಲಿದೆ.  ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರು ವಸತಿಗೃಹ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಮತ್ತು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಭಾಗವಹಿಸಲಿದ್ದಾರೆ. ಸ್ಟಾರ್ ದರ್ಜೆ ಹೊಟೇಲ್‌ಗಳಿಗೆ ಸರಿಸಮನಾಗಿ ನಿರ್ಮಿಸಲಾದ ಈ ನೂತನ ವಸತಿಗೃಹ ಹವಾ ನಿಯಂತ್ರಿತ ಮತ್ತು ಟಿವಿ ಹೊಂದಿರುವ ಕೊಠಡಿಗಳು, ಲಿಫ್ಟ್ ಮತ್ತು 24 ಗಂಟೆ ಬಿಸಿ ನೀರಿನ ವ್ಯವಸ್ಥೆ, ಪ್ರತಿ ಕೊಠಡಿಯಲ್ಲೂ ಫ್ರಿಡ್ಜ್,  ಸುರಕ್ಷಿತ ಪಾರ್ಕಿಂಗ್ ವ್ಯವಸ್ಥೆ ಮತ್ತು ಉಪಾಹಾರ ಗೃಹ ಒಳಗೊಂಡಿದ್ದು ಆರಾಮದಾಯಕ ವಿಶ್ರಾಂತಿಗೊಂದು ಸುಂದರತಾಣವಾಗಿದೆ.
ಚುನಾವಣಾ ಕಂಟ್ರೋಲ್ ರೂಂ
ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಚುನಾವಣೆಯು ಶಾಂತಿ ಸುವ್ಯವಸ್ಥೆ ಹಾಗೂ ಮುಕ್ತವಾಗಿ ನಡೆಸುವ ದೃಷ್ಟಿಯಿಂದ ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಚುನಾವಣಾ ಕಂಟ್ರೋಲ್ ರೂಂ ತೆರೆಯಲಾಗಿದೆ. ಕಂಟ್ರೋಲ್ ರೂಂನ ಟೋಲ್ ಪ್ರೀ ಸಂಖ್ಯೆ 1800-4252024 ಹಾಗೂ ದೂರವಾಣಿ ಸಂಖ್ಯೆ 08263- 220204, 220695, 222044 ಆಗಿದ್ದು ಸಾರ್ವಜನಿಕರು ಚುನಾವಣಾ ಸಂಬಂಧ ದೂರು ಅಥವಾ ಸಲಹೆಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ ಅಹವಾಲು ಸಲ್ಲಿಸಬಹುದಾಗಿದೆ ಎಂದು ಮೂಡಿಗೆರೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹದ್ದಿನ ಕಣ್ಣು ಅಗತ್ಯ: ಭರತ್
ಮೂಡಿಗೆರೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ರಾಜಕಾರಣಿಗಳು ವಾಮಾಚಾರ ಮಾರ್ಗವನ್ನು ಅನುಸರಿಸಲು ಸಿದ್ಧರಾಗಿದ್ದು, ಅದನ್ನು ತಡೆಗಟ್ಟುವಲ್ಲಿ ಚುನಾವಣಾ ಆಯೋಗ ಹದ್ದಿನ ಕಣ್ಣಿಡಬೇಕಾಗಿದೆ ಎಂದು ಬಿಎಸ್ಸಾರ್ ಕಾಂಗ್ರೆಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ. ಭರತ್ ಅಭಿಪ್ರಾಯಪಟ್ಟರು.ಮಂಗಳವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬಿಜೆಪಿ ಸರಕಾರದ ದುರಾಡಳಿತದಿಂದ ಬೇಸತ್ತ ಜನರು ಈ ಬಾರಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಕಾಂಗ್ರೆಸ್ ಸ್ಥಳೀಯ ಚುನಾವಣೆಯಲ್ಲಿ ಹೆಚ್ಚಿನ ಗೆಲವು ಸಾಧಿಸಿದೆ ಎಂದು ವಿಧಾನಸಭಾ ಚುನಾವಣೆಯಲ್ಲಿ ಹಾಗೆಯೇ ನಡೆಯುತ್ತದೆ ಎಂದು ಹಗಲು ಕನಸು ಕಾಣುತ್ತಿದೆ. ಇವರನ್ನು ತಿರಸ್ಕರಿಸಲು ಜನರು ಸಿದ್ಧರಾಗಿದ್ದಾರೆ.
ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.