ಚಿಕ್ಕಮಗಳೂರು

ರಸ್ತೆ ಅತಿಕ್ರಮ ವಿರೋಧಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಕೊಪ್ಪ, ಏ. 2
ತಾಲೂಕಿನ ಹಿರೇಕೊಡಿಗೆ ಗ್ರಾಪಂ ವ್ಯಾಪ್ತಿಯ ಕುಂಬಾರಕೊಪ್ಪ ಮತ್ತು ಸೂರೇಕೊಪ್ಪ   ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಜಿಪಂ ರಸ್ತೆಗೆ ನಿರ್ಮಿಸಿರುವ ಚಂರಡಿ ಕಿತ್ತು ಗೋಡೆ ನಿರ್ಮಿಸಿ ರಸ್ತೆ ಆಕ್ರಮಿಸಿದ್ದು, ಅದನ್ನು ತೆರವುಗೊಳಿಸಲು ಆಗ್ರಹಿಸಿ ಮಂಗಳವಾರ ಹಿರೇಕೂಡಿಗೆ ಗ್ರಾಪಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಹಿಂದೆ ಜಿಪಂನಿಂದ ಈ ಎರಡೂ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ರಸ್ತೆ ನಿರ್ಮಾಣ ಮಾಡಿತ್ತು. ಈ ಭಾಗದಲ್ಲಿ ಸುಮಾರು 30 ಮನೆ ಇದ್ದು, 100 ಅಡಿ ಉದ್ದ ಬಾಕ್ಸ್ ಚರಂಡಿ ಮಾಡಲಾಗಿದೆ. ಆದರೆ ಕೆಲವು ದಿನಗಳಿಂದ ಇಲ್ಲಿನ ವಾಸಿಯಾದ ಶಂಕರಪ್ಪ ಎಂಬುವರು ರಸ್ತೆಗೆ ನಿರ್ಮಾಣ ಮಾಡಿರುವ ಬಾಕ್ಸ್ ಚರಂಡಿ ತೆಗೆದು ಚರಂಡಿಗೆ ಗೋಡೆ ಕಟ್ಟಿಕೊಂಡಿದ್ದಾರೆ ಎಂಬುದು ಗ್ರಾಮಸ್ಥರ ಆರೋಪ.
ಮಳೆಗಾಲದಲ್ಲಿ ನೀರು ರಸ್ತೆ ಮೇಲೆ ಹರಿದು ರಸ್ತೆ ಸಂಪೂರ್ಣ ಹಾಳಾಗುವ ಎಲ್ಲಾ ಸಾಧ್ಯತೆಗಳು ಇರುವುದರಿಂದ ಗ್ರಾಪಂ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲಿಸಿ ಅತಿಕ್ರಮಿಸಿರುವ ರಸ್ತೆ ತೆರವುಗೊಳಿಸಬೇಕು ಎಂದು  ಗ್ರಾಮಸ್ಥರು ಅಗ್ರಹಿಸಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಶಿಕುಮಾರ್ ಅವರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಚಂದ್ರವತಿ ಹಾಜರಿದ್ದರು.
ಗ್ರಾಮಸ್ಥರಾದ ಅರುಣ್, ಮಹೇಶ್, ಗ್ರಾಪಂ ಸದಸ್ಯೆ ಪ್ರೇಮಾವತಿ, ಪ್ರದೀಪ್, ಸುಧಾಕರ್, ಸುಜಾತ, ರಮೇಶ್, ನಾಗೇಶ್, ಸುಮಿತ್ರ, ಮಂಜು, ಹರೀಶ್, ಶಾಂತ ಮೊದಲಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.