ಚಿಕ್ಕಮಗಳೂರು

ಕುಡಿವ ನೀರಿಗಾಗಿ ಒತ್ತಾಯಿಸಿ ಪ್ರತಿಭಟನೆ

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಏ.3
ಕುಡಿವ ನೀರಿಗಾಗಿ ಒತ್ತಾಯಿಸಿ ತಾಲೂಕಿನ ಸಗಣಿಪುರ ಗ್ರಾಮಸ್ಥರು ಬುಧವಾರ ಖಾಲಿ ಕೊಡ ಪ್ರದರ್ಶಿಸುವ  ಮೂಲಕ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಮೆರವಣಿಗೆ ನಡೆಸಿದ ಮಹಿಳೆಯರು ರಸ್ತೆಯಲ್ಲಿ ಕೊಡ ಇಟ್ಟು ನೀರಿಗಾಗಿ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾಯಾಧ್ಯಕ್ಷ ಎಸ್.ಎಲ್. ಬೋಜೇಗೌಡ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಸಚಿವ ಸಿ.ಟಿ. ರವಿ ಅವರಿಗೆ ಹಳ್ಳಿಗಳಲ್ಲಿ ಗ್ರಾಮಸ್ಥರಿಗೆ  ಕುಡಿವ ನೀರು ಮತ್ತು ಸಮರ್ಪಕ ವಿದ್ಯುತ್ ಪೂರೈಸಲು ಸಾಧ್ಯವಾಗಿಲ್ಲವೇ ಎಂದು ಪ್ರಶ್ನಿಸಿದರು. ವಸ್ತುಸ್ಥಿತಿ  ಅರಿತು ಕೂಡಲೇ ನೀರು ಪೂರೈಸಿ ಜನ ಜಾನುವಾರುಗಳ ಬಾಯಾರಿಕೆ ನೀಗಿಸದಿದ್ದಲ್ಲಿ ಮತದಾರರು ಸರಿಯಾದ ಪಾಠ ಕಲಿಸಲಿದ್ದಾರೆ ಎಂದರು.
ಕಳಕಳಿಗೆ ಹಿಡಿದ ಕನ್ನಡಿ: ಬಾಯಿಬಿಟ್ಟರೆ 800 ಕೋಟಿ ಅಭಿವೃದ್ಧಿ ಎನ್ನುವ ಸಚಿವರಿಗೆ ಕ್ಷೇತ್ರದಲ್ಲಿರುವ ಕುಡಿಯುವ ನೀರಿನ ಬವಣೆ  ನೀಗಿಸಲು ಮುಂದಾಗುವಂತ ಆಲೋಚನೆ ಬಾರದಿರುವುದು ಜನರ ಬಗ್ಗೆ ಇರುವ ಕಳಕಳಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಟೀಕಿಸಿದರು.
ಗ್ರಾಮಸ್ಥರಾದ ಮಂಜುನಾಥ್ ಮಾತನಾಡಿ, ನಗರ ಪ್ರದೇಶಕ್ಕೆ ಕೂಗಳತೆ ದೂರದಲ್ಲಿರುವ ಈ ಹಳ್ಳಿಯಲ್ಲಿ ಕುಡಿವ ನೀರು ಮತ್ತು ವಿದ್ಯುತ್ ಸಮಸ್ಯೆ ಸೇರಿದಂತೆ ಬಸ್ಸಿನ ಸೌಲಭ್ಯವೂ ಇಲ್ಲ.
ಮಹಿಳೆಯರು ಯಾವುದೇ ದಿನಬಳಕೆ ವಸ್ತು ತರಬೇಕೆಂದರೆ ಆಟೋಗೆ ನೂರಾರು ರೂಪಾಯಿ ವ್ಯಯಿಸಬೇಕಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಅನನುಕೂಲವಾಗಿದೆ. ಈ ಬಗ್ಗೆ ಕೂಡಲೇ ಗಮನಹರಿಸಿ ಸಮಸ್ಯೆ ಪರಹರಿಸಬೇಕೆಂದು ಒತ್ತಾಯಿಸಿದರು.
ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಹೊಲದಗದ್ದೆ ಗಿರೀಶ್, ಜೆಡಿಎಸ್ ಮುಖಂಡ  ಸೋಮೇಗೌಡ, ಗ್ರಾಮಸ್ಥರಾದ ಕೃಷ್ಣೇಗೌಡ, ಯತೀಶ್, ಲಕ್ಕಮ್ಮ, ರಂಗಮ್ಮ, ಗಂಗಮ್ಮ, ರವಿ, ಪಾಂಡು ಸೇರಿದಂತೆ ಹಲವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.