ಮತದಾನ ಜಾಗೃತಿ
ಶೃಂಗೇರಿ: ತಾಲೂಕಿನ ವಿವಿಧೆಡೆ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ನೆಮ್ಮಾರಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವತಿಯಿಂದ ಪಟ್ಟಣದಲ್ಲಿ ಮತದಾನ ಜಾಗೃತಿ ಅಭಿಯಾನ ಜಾಥ ನಡೆಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಹೆಗ್ಡೆ, ಮುಖ್ಯ ಶಿಕ್ಷಕಿ ಸಾವಿತ್ರಿ ಸತೀಶ್, ಅನಸೂಯ, ಶ್ವೇತಾ, ತಿಪ್ಪೇಶಪ್ಪ ಮೊದಲಾದವರು ಹಾಜರಿದ್ದರು. ಶೃಂಗೇರಿ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವತಿಯಿಂದ ಬೃಹತ್ ಜಾಥಾ ನಡೆಯಿತು. ಘೋಷಣೆಗಳೊಂದಿಗೆ ಸಾಗಿದ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು.
ಇಂದು ವಿದ್ಯುತ್ ನಿಲುಗಡೆ
ಚಿಕ್ಕಮಗಳೂರು: ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಿಂದ ಹೊರಹೊಮ್ಮುವ ಎಲ್ಲಾ ಪಟ್ಟಣ ಮತ್ತು ಗ್ರಾಮೀಣ ಭಾಗಗಳಲ್ಲಿ ಆಲ್ದೂರು, ಬಾಳೆಹೊನ್ನೂರು, ಕೊಪ್ಪ, ಕ್ವಾಡಹಿತ್ಲು, ಜಯಪುರ, ಶೃಂಗೇರಿ, ಕಳಸ ವಿ.ವಿ ಕೇಂದ್ರಗಳ ನಗರ ಮತ್ತು ಗ್ರಾಮೀಣ ಫೀಡ್ಗಳಿಂದ ಹೊರಹೊಮ್ಮುವ ಎಲ್ಲಾ ಪ್ರದೇಶಗಳಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ರಾಜ್ಯ ಮಟ್ಟಕ್ಕೆ ಆಯ್ಕೆ
ನರಸಿಂಹರಾಜಪುರ: ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದ ತಾಲೂಕಿನ ಬೆಳ್ಳೂರು ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ವಿ.ಎಂ. ದೇವರಾಜ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಹ್ಯಾಮೆರ್ ಥ್ರೋನಲ್ಲಿ ದ್ವಿತೀಯ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

