ವದಂತಿಗಳಿಗೆ ಕಿವಿಗೊಡಬೇಡಿ: ದತ್ತ
ಕಡೂರು: ವಿಧಾನಸಭೆಯ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಪಕ್ಷದ ನಾಯಕರು ತನ್ನನ್ನು ಘೋಷಿಸಿರುವುದರಿಂದ ಮತದಾರರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ವೈ.ಎಸ್.ವಿ. ದತ್ತ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿ, ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಹಂಚಿಕೆ ವಿಚಾರದಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆದ ನಂತರ ಆ ಪಕ್ಷದಲ್ಲಿ ಉಂಟಾಗಿರುವ ಆಂತರಿಕ ವಿದ್ಯಾಮಾನಗಳ ಬಗ್ಗೆ ಜೆಡಿಎಸ್ಗೆ ಯಾವುದೇ ಆಸಕ್ತಿ ಇಲ್ಲ. ಆದರೆ ಕ್ಷೇತ್ರದ ಜನರಲ್ಲಿ ಕೆಲವರು ಅನಗತ್ಯ ವದಂತಿ ಹುಟ್ಟಿಸುತ್ತಿರುವುದರಿಂದ ಜನರಿಗೆ ಸ್ಪಷ್ಟೀಕರಣ ನೀಡುತ್ತಿದ್ದು, 2005 ರಲ್ಲಿ ಕಡೂರು ವಿಧಾನಸಭಾ ಕ್ಷೇತ್ರಕ್ಕೆ ನಾನು ಪ್ರವೇಶ ಪಡೆಯುವ ಮೂಲಕ ಕ್ಷೇತ್ರದ ಜನರು ತಮಗೆ ತೋರಿಸಿದ ಅಭಿಮಾನ, ವಿಶ್ವಾಸದಿಂದಾಗಿ ಜೆಡಿಎಸ್ನ್ನು ಸಾವಿರಾರು ಕಾರ್ಯಕರ್ತರು ಮುಖಂಡರೊಂದಿಗೆ ಕ್ಷೇತ್ರದ ಮತದಾರರು ನನ್ನ ಜಾತಿ ರಾಜಕಾರಣ ಅಳಿಸಿ ಪ್ರೀತಿ ರಾಜಕಾರಣಕ್ಕೆ ಬೆಂಬಲ ನೀಡುವ ಮೂಲಕ ಪಕ್ಷಕ್ಕೆ ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

