ನೀತಿ ಸಂಹಿತೆ: 2 ಪ್ರಕರಣ ದಾಖಲು
ಚಿಕ್ಕಮಗಳೂರು, ಏ.3
ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರ ವಿರುದ್ಧ ಬುಧವಾರ ಎರಡು ಪ್ರಕರಣಗಳು ದಾಖಲಾಗಿವೆ. ನಗರ ಪ್ರದೇಶದಲ್ಲಿ ಒಂದು ಪ್ರಕರಣ ದಾಖಲಾಗಿದ್ದರೆ, ಮತ್ತೊಂದು ಪ್ರಕರಣ ತಾಲೂಕಿನ ಬೀಕನಹಳ್ಳಿಯಲ್ಲಿ ನಡೆದಿದೆ. ಬೀಕನಹಳ್ಳಿಯ ಸಮುದಾಯ ಭವನದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಸಮಾವೇಶದಲ್ಲಿ ಭಾಗವಹಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ನೀತಿ ಸಂಹಿತೆ ಅಧಿಕಾರಿ ಶ್ರೀನಿವಾಸ್ ನೀಡಿರುವ ದೂರಿನನ್ವಯ ಪುಟ್ಟೇಗೌಡ ಸೇರಿದಂತೆ ಇತರೆ ಇಬ್ಬರ ಮೇಲೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಕೆಇಬಿ ವೃತ್ತದಲ್ಲಿ ಹೊಸದಾಗಿ ಸೇತುವೆ ನಿರ್ಮಾಣಗೊಂಡಿದ್ದು, ಬುಧವಾರ ಈ ಸೇತುವೆ ಉದ್ಘಾಟನೆ ಮಾಡಲಾಗಿದೆ. ಈ ಸಂಬಂಧ ಡಾ. ನಾಣಯ್ಯ, ನಗರಸಭಾ ಸದಸ್ಯ ಪುಷ್ಪರಾಜ್ ಹಾಗೂ ರಾಜಶೇಖರ್ ವಿರುದ್ಧ ಇಲ್ಲಿನ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎರಡು ಪ್ರಕರಣಗಳು ಸೇರಿದಂತೆ ಬಿಜೆಪಿಯ ವಿರುದ್ಧ ಇಲ್ಲಿವರೆಗೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಜಾತಿ ರಾಜಕೀಯ ಸರಿಯಲ್ಲ
ಮೂಡಿಗೆರೆ: ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದು, ಇಲ್ಲಿಂದ ಆರಿಸಿ ಬಂದು ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಶಾಸಕರು ಚುನಾವಣೆ ಸಮೀಪಿಸುತ್ತಿದ್ದಂತೆ ಎಡಪಂಕ್ತಿ-ಬಲಪಂಕ್ತಿ ಎಂದು ಹೇಳಿ ಜಾತಿ ರಾಜಕೀಯದಲ್ಲಿ ತೊಡಗಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಗೋಪಾಲ ಗೌಡ ವಿಷಾದ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

