ಚಿಕ್ಕಮಗಳೂರು

ಮತದಾರರ ಪಟ್ಟಿ ಸೇರ್ಪಡೆಗೆ 7 ಕೊನೆ ದಿನ: ತಹಸೀಲ್ದಾರ್ ಕೃಷ್ಣಮೂರ್ತಿ

Published On :

ಕ.ಪ್ರ ವಾರ್ತೆ, ನರಸಿಂಹರಾಜಪುರ, ಏ.3
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಏ.7ರ ವರೆಗೆ ಅವಕಾಶವಿದೆ ಎಂದು ತಹಸೀಲ್ದಾರ್ ಕೃಷ್ಣಮೂರ್ತಿ ತಿಳಿಸಿದರು.
ಬುಧವಾರ ಅಂಬೇಡ್ಕರ್ ಭವನದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಬಿಎಲ್‌ಒಗಳಿಗೆ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ ಯೋಜನೆಯಡಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಲ್ಲಾ ಮತದಾರರು ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಸರ್ಕಾರವು ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಕೆಲವರಿಗೆ 25 ವರ್ಷವಾದರೂ ಇನ್ನೂ ಮತದಾರರ ಪಟ್ಟಿಯಲ್ಲಿ ಸೇರಿಕೊಂಡಿರುವುದಿಲ್ಲ.ಅಂತವರು ತಮ್ಮ ಪಡಿತರ ಚೀಟಿಯೊಂದಿಗೆ ಬಂದು ಮತದಾರರ ಪಟ್ಟಿಗೆ ಸೇರಬಹುದು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಮೀಣ ಭಾಗದ ಜನರೊಂದಿಗೆ ಹೆಚ್ಚು ಸಂಪರ್ಕ ಇರುವುದರಿಂದ ಅವರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.
ತಾಲೂಕು ಸರ್ಕಾರಿ ಆಸ್ಪತ್ರೆಯ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಾ ಉಪನ್ಯಾಸ ನೀಡಿ, ಜಾಗೃತಿ ಮತದಾರರಿಂದ ಮಾತ್ರ ಉತ್ತಮ ಸರ್ಕಾರ ಬರಲಿದೆ. ಎಲ್ಲರೂ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು. 2013ರ ಜನವರಿ 1ಕ್ಕೆ 18 ವರ್ಷ ತುಂಬಿದ ಎಲ್ಲರಿಗೂ ಮತದಾನದ ಹಕ್ಕು ಬರಲಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಮತದಾರರು ಮುಂಚಿತವಾಗಿ ಪರಿಶೀಲನೆ ಮಾಡಿಕೊಳ್ಳಬೇಕು. ಮತದಾನ ಮಾಡಲು ಗುರುತಿನ ಪತ್ರ ಕಡ್ಡಾಯವಾಗಿದೆ ಎಂದರು.
ಬೂತ್ ಮಟ್ಟದ ಅಧಿಕಾರಿ ಎಂ. ಪ್ರಕಾಶ್ ಮತದಾನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಯವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಉಷಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಪಂ ಸಿಇಒ ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಯುವಜನ ಸೇವಾ ಇಲಾಖೆಯ ಸಂಪನ್ಮೂಲ ವ್ಯಕ್ತಿ ಶಾಂತ ನಾಯಕ್, ಪಪಂ ಮುಖ್ಯಾಧಿಕಾರಿ ನಾಗೇಂದ್ರ, ತಾಲೂಕು ದೈಹಿಕ ಪರಿವೀಕ್ಷಕ ಕೆ. ಮೌನೇಶ್ವರಾಚಾರ್, ತಾಲೂಕು ಸರ್ಕಾರಿ ಆಸ್ಪತ್ರೆಯ ನೇತ್ರ ತಜ್ಞ ಡಾ. ಸೌಮ್ಯ ಉಪಸ್ಥಿತರಿದ್ದರು.
ಗಾಯತ್ರಿ ಪ್ರಾರ್ಥಿಸಿದರು. ಸಿಡಿಪಿಒ ಜ್ಯೋತಿ ಲಕ್ಷ್ಮಿ ಸ್ವಾಗತಿಸಿದರು. ಮೋಗಣ್ಣಗೌಡ ಕಾರ್ಯಕ್ರಮ ನಿರೂಪಿಸಿದರು. ಶಿವಲಿಂಗಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.