ಚಿಕ್ಕಮಗಳೂರು

ಪಂಕ್ತಿ ಭೇದ: ಕ್ರಮಕ್ಕೆ ಆಗ್ರಹ

Published On :

ಕ.ಪ್ರ ವಾರ್ತೆ, ಮೂಡಿಗೆರೆ, ಏ.4
1952ರಿಂದಲೂ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದೆ. ಮೀಸಲು ಕ್ಷೇತ್ರದಲ್ಲಿ ಎಡ- ಬಲ ಎಂದು ಪಂಕ್ತಿ ಭೇದ ಮಾಡ ಹೊರಟಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಿ. ಶಿವಾನಂದ ಒತ್ತಾಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿ, ಮೂಡಿಗೆರೆ ವಿಧಾನಸಭಾ ಕ್ಷೇತ್ರ 1952ರಿಂದಲೂ ಹೊರಗಿನ ಅಭ್ಯರ್ಥಿಗಳನ್ನು ಗೆಲ್ಲಿಸಿ ಶಾಸನ ಸಭೆಗೆ ಕಳುಹಿಸಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದವರೇ ಈಗ ಎಡ- ಬಲ ಎಂದು ಪಕ್ಷ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರೆದಲ್ಲಿ ಮಲೆನಾಡಿನಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲಾ ಎಂದು ಆತಂಕ ವ್ಯಕ್ತ ಪಡಿಸಿದ್ದಾರೆ.
ಮೂಡಿಗೆರೆ ಕ್ಷೇತ್ರ ಬಹುತೇಕ ಸಾಮಾನ್ಯವರ್ಗದವರನ್ನು ಹೊಂದಿದ ಕ್ಷೇತ್ರವಾಗಿದೆ. 1.25 ಲಕ್ಷ ದಲಿತೇತರನ್ನು ಹೊಂದಿದೆ. ಯಾರಲ್ಲೂ ಜಾತಿ ಮನೋಭಾವನೆ ಹೊಂದಿರಲಿಲ್ಲ. ಆದರೆ ಕಳೆದ 1 ವಾರದ ಹಿಂದೆ  ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕಾಗಿ ಮತ್ತು ಪಕ್ಷಾಂತರಿಗೆ ಟಿಕೆಟ್ ದೊರೆಯಲಿಲ್ಲ ಎಂಬ ಕಾರಣಕ್ಕೆ ಕೆಲವು ಪಕ್ಷದ ಸದಸ್ಯರು ಎಡ- ಬಲ ಎಂದು ಜಾತಿ ಎತ್ತಿ ಹಿಡಿದು ಅಂಬೇಡ್ಕರ್ ತತ್ವ ಸಿದ್ಧಾಂತ ಹಾಗೂ ಬಸವಣ್ಣರ ಧಾರ್ಮಿಕ ಮನೋಭಾವನೆಗೆ ಕಪ್ಪು ಚುಕ್ಕೆ ತಂದಿದ್ದಾರೆ. ಇದು ದಲಿತ ಸಮುದಾಯಕ್ಕೆ ಆದ ಅವಮಾನವಾಗಿದೆ. ದಲಿತರ ಹೆಸರಿನಲ್ಲಿ ದಲಿತ ನಾಯಕರೇ ಎಡ- ಬಲ ಎಂಬ ಪಂಕ್ತಿ ಭೇದ ಮಾಡುತ್ತಿದೆ. ಇದು ದಲಿತ ಸಮುದಾಯವನ್ನೇ ಒಡೆಯುವ ಹುನ್ನಾರ ನಡೆಸುತ್ತಿದೆ. ಕಾಂಗ್ರೆಸ್‌ನಲ್ಲಿ ಮಾತ್ರ ಎಡ- ಬಲ. ಹಾಗಾದರೆ ಬೇರೆ ಪಕ್ಷದಲ್ಲಿ ಇಲ್ಲವೆಂದು ಪ್ರಶ್ನಿಸಿದರು.
ದಲಿತರಿಗೆ ಮಾತ್ರವಲ್ಲದೆ ಪ್ರತಿಯೊಂದು ಸಮುದಾಯಕ್ಕೆ ಅಂಬೇಡ್ಕರ್ ಮಾನವತವಾದಿ, ನಮಗೆ ಎಡ-ಬಲ ಎಂಬುದೇ ಇಲ್ಲ. ನಾವೆಲ್ಲರು ಒಂದೇ ಪಕ್ಷದ ಗೆಲುವಿಗಾಗಿ ಶ್ರಮಿಸುವಂತೆ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.