ಕ್ರೀಡಾಕೂಟಕ್ಕೆ ಚಾಲನೆ
ಶೃಂಗೇರಿ: ಕ್ರೀಡೆಗಳಲ್ಲಿ ಸ್ಪರ್ಧಿಸಿದವರೆಲ್ಲ ಗೆಲ್ಲಲು ಸಾಧ್ಯವಿಲ್ಲ, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ, ಅದಕ್ಕಿಂತ ಸ್ಪರ್ಧಿಸುವುದು ಮುಖ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಕೆ.ಜಿ. ಸಿದ್ದಲಿಂಗೇಗೌಡ ಹೇಳಿದರು.
ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಗಳು ಸದೃಡ, ಸಮೃದ್ಧಿ ಬದುಕಿಗೆ ಸ್ಫೂರ್ತಿಯಾಗಿದೆ. ಮನುಷ್ಯನ ದೈಹಿಕ ಬೆಳವಣಿಗೆಯ ಜೊತೆಗೆ ಮಾನಸಿಕ ಬೆಳವಣಿಗೆಗೂ ಪೂರಕವಾಗಿದೆ. ಅಲ್ಲದೇ ಒಗ್ಗಟ್ಟಿನ ಬದುಕಿಗೂ ಸ್ಫೂರ್ತಿಯಾಗಿದೆ ಎಂದು ತಿಳಿಸಿದರು. ಕ್ರೀಡೆಗಳು ಆಚರಣೆಗಳು, ಜನರಲ್ಲಿ ಸ್ನೇಹ ಬಾಂಧವ್ಯ ಉಳಿಸಿವೆ. ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಧೈರ್ಯ, ಆತ್ಮವಿಶ್ವಾಸ ಮೂಡಿಸಿ ಅವರಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಸೂಕ್ತ ವೇದಿಕೆಯಾಗಿದೆ.
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಶಾರೀರಿಕ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು. ಪಠ್ಯಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕ ವಲಯಗಳಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಕನ್ನಡ ವಿಭಾಗದ ಮುಖ್ಯಸ್ಥ ಎಂ.ವೈ. ಶಿವರಾಮು, ರಾಜ್ಯಶಾಸ್ತ್ರ ವಿಭಾಗದ ರೋಹಿತ್ ಹೆಗ್ಡೆ, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
ಇಂದು ಶೃಂಗೇರಿ ಶ್ರೀಗಳ ಆಗಮನ
ಶೃಂಗೇರಿ: ಕಳೆದ ವರ್ಷದ ಫೆಬ್ರವರಿ 26ರಿಂದ ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ ಧರ್ಮ ದಿಗ್ವಿಜಯ ಯಾತ್ರೆ ಮುಗಿಸಿ ಶೃಂಗೇರಿ ಶ್ರೀಗಳು ಶುಕ್ರವಾರ ಸಂಜೆ ಪಟ್ಟಣಕ್ಕೆ ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಶ್ರೀಗಳಿಗೆ ಸ್ವಾಗತ ಕೋರಲು ಪುರಪ್ರವೇಶ ಉತ್ಸವ ಆಯೋಜಿಸಿದೆ. ಬ್ರಹ್ಮ ರಥದಲ್ಲಿ ಕುಳಿತು ಶ್ರೀಗಳು ಪುರಪ್ರವೇಶ ಮಾಡಲಿದ್ದು, ಛತ್ರ ಚಾಮರ, ವಾದ್ಯ, ಸ್ತಬ್ಧ ಚಿತ್ರಗಳು, ಜಾನಪದ ಕಲಾತಂಡಗಳು ಉತ್ಸವಕ್ಕೆ ವಿಶೇಷ ಮೆರಗು ನೀಡಲಿವೆ. ಪಟ್ಟಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

