ವ್ಯವಹಾರ ಸೇವೆಯೆಂದು ಪರಿಗಣಿಸಿ
ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ. 4
ಅಂಗಡಿ ಮುಂಗಟ್ಟು ಸೇರಿದಂತೆ ಇನ್ನಿತರೆ ವಾಣಿಜ್ಯ ವಹಿವಾಟುದಾರರು ತಮ್ಮ ವ್ಯವಹಾರವನ್ನು ಸೇವೆಯೆಂದು ಪರಿಗಣಿಸಿ ಗ್ರಾಹಕರೊಡನೆ ವ್ಯವಹರಿಸಬೇಕು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಕಿವಿ ಮಾತು ಹೇಳಿದ್ದಾರೆ.
ನಗರದ ಬಸವನಹಳ್ಳಿಯ ನರಸಿಂಗರಾವ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ದಿ ಗ್ರ್ಯಾಂಡ್ ಕೃಷ್ಣ ಐಷಾರಾಮಿ ವಸತಿ ಗೃಹವನ್ನು ಗುರುವಾರ ಸಾರ್ವಜನಿಕ ಸೇವೆಗೆ ಸಮರ್ಪಿಸಿ ಅವರು ಆಶೀರ್ವಚನ ನೀಡಿದರು.
ವಿಶ್ವಾಸಾರ್ಹತೆ ಗಳಿಸಿ: ಮನುಷ್ಯ ಮೂಲತಃ ಸಂಘ ಜೀವಿಯಾಗಿದ್ದು ಆತನ ದೈನಂದಿನ ಬದುಕಿನಲ್ಲಿ ಕೊಡುವುದು, ಕೊಳ್ಳುವುದು ನಿರಂತರವಾಗಿ ನಡೆಯುವ ಪ್ರಕ್ರಿಯೆ ಎಂದ ಅವರು, ಸ್ವಾರ್ಥವಿಲ್ಲದೇ ಯಾವುದೇ ವ್ಯವಹಾರವನ್ನು ನಡೆಸಲಾಗದು. ಆದರೆ, ಇದ್ದುದರಲ್ಲೇ ಧರ್ಮ, ಕರ್ಮವನ್ನು ವಿವೇಚಿಸಿ ಅಲ್ಪ ಲಾಭದಲ್ಲೇ ತೃಪ್ತಿ ಹೊಂದುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು, ಪ್ರಾಮಾಣಿಕವಾಗಿ ಗ್ರಾಹಕರದೊಂದಿಗೆ ವ್ಯವಹರಿಸಬೇಕು ಎಂದು ಸಲಹೆ ಮಾಡಿದರು.
ಯಾವುದೇ ಒಂದು ಸಂಸ್ಥೆ ಬೆಳೆಯಬೇಕಾದರೆ ಅದು ಗ್ರಾಹಕರ ಪ್ರೀತಿ ಮತ್ತು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು. ಸಂಸ್ಥೆಯ ಬಗ್ಗೆ ಜನರಲ್ಲಿ ಪ್ರೀತಿ ಮತ್ತು ನಂಬಿಕೆಯಿಲ್ಲದಿದ್ದರೆ ಅದು ಯಾವುದೇ ಕಾರಣಕ್ಕೂ ಬೆಳೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಸಮಾರಂಭಕ್ಕೆ ಮುನ್ನ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ವಸತಿ ಗೃಹದ ಮಾಲಿಕರಾದ ಡಾ. ಆರ್.ಕೆ. ಶೆಟ್ಟಿ ಕುಟುಂಬದವರು ಪಾದಪೂಜೆ ನೆರವೇರಿಸಿದರು.
ಬಂಟರ ಸಂಘದ ಮಾಜಿ ಅಧ್ಯಕ್ಷ ಕೆ.ಟಿ. ಶೆಟ್ಟಿ, ಖಜಾಂಚಿ ಶ್ರೀಕಾಂಯ್ ಶೆಟ್ಟಿ, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಉಜ್ವಲ್ ಡಿ. ಪಡುಬಿದ್ರಿ, ಮೂಡಿಗೆರೆಯ ಡಾ. ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

