ಚಿಕ್ಕಮಗಳೂರು

ಅಲ್ಪಸಂಖ್ಯಾತರ ಕಡೆಗಣಿಸಿರುವ ಬಿಜೆಪಿ, ಕಾಂಗ್ರೆಸ್

Published On :

ಕಪ್ರ ವಾರ್ತೆ,ಚಿಕ್ಕಮಗಳೂರು, ಏ. 5
ಚುನಾವಣಾ ಸಂದರ್ಭದಲ್ಲಿ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಅಲ್ಪಸಂಖ್ಯಾತರು ನೆನಪಾಗುತ್ತಾರೆ. ಚುನಾವಣೆ ಮುಗಿದ ಬಳಿಕ ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಾರೆ. ಎಲ್ಲಾ ಸಮಯದಲ್ಲೂ ಸ್ಪಂದಿಸುವ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜೆಡಿಎಸ್ ರಾಜ್ಯ ಯುವ ಕಾರ್ಯಾಧ್ಯಕ್ಷ ಸಿ.ಎನ್. ಅಕ್ಮಲ್ ಹೇಳಿದ್ದಾರೆ.
ನಗರದ ಗೌರಿಕಾಲುವೆಯಲ್ಲಿ ಗುರುವಾರ ಸಂಜೆ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭಗಳಲ್ಲಿ ಮಾತ್ರ ಅಲ್ಪಸಂಖ್ಯಾತರನ್ನು ಮತಕ್ಕಾಗಿ ಓಲೈಸಲಾಗುತ್ತಿದೆ.  ಪ್ರಜ್ಞಾವಂತ ಮತದಾರರು ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಪಕ್ಷದ ಕಾರ್ಯಕರ್ತರನ್ನು ಬೆಳೆಸಿದ್ದಾರೆ: ಸ್ಥಳೀಯ ಶಾಸಕರು ಅಭಿವೃದ್ಧಿ ಹೆಸರಿನಲ್ಲಿ ಗುತ್ತಿಗೆದಾರರಾಗಿ ಪಕ್ಷದ ಕಾರ್ಯಕರ್ತರನ್ನು ಬೆಳೆಸಿದ್ದಾರೆ. ಹಂಚಿಕೊಂಡು ತಿನ್ನುವ ಇವರ ಸೂತ್ರದಿಂದ ಜನರ ಹಣ ಇವರ ಜೇಬು ಸೇರುತ್ತಿದೆ. ಕಾಮಗಾರಿಗಳೆಲ್ಲ ಕಳಪೆಯಾಗಿದ್ದು, ಅಧಿಕಾರಿಗಳು ಕೈಕಟ್ಟಿ ಕುಳಿತುಕೊಂಡಿದ್ದಾರೆ ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮ ಆಡಳಿತಾವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿ ಪಕ್ಷಾತೀತವಾಗಿ ಎಲ್ಲರ ವಿಶ್ವಾಸವನ್ನು ಪಡೆದಿದ್ದಾರೆ. ವಿಧವಾ ವೇತನ, ವೃದ್ಧಾಪ್ಯ ವೇತನ, ಸೈಕಲ್ ವಿತರಣೆಗಳನ್ನು ಜಾರಿಗೆ ತಂದಿದ್ದು ಜೆಡಿಎಸ್ ಪಕ್ಷ. ನಿಮ್ಮ ಸಮಸ್ಯೆಗೆ ಸ್ಪಂದಿಸುವ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿ ಧರ್ಮೇಗೌಡರಿಗೆ ಮತ ನೀಡಿ ಬೆಂಬಲಿಸಬೇಕೆಂದು ಕೋರಿದರು.
ಸಂಘರ್ಷ ಉಂಟು ಮಾಡಿದ್ದಾರೆ: ಜೆಡಿಎಸ್ ಮುಖಂಡ ಕೆ.ಆರ್. ಅನಿಲ್ ಕುಮಾರ್ ಮಾತನಾಡಿ, ಬಾಬಾಬಾ ಬುಡನ್‌ಗಿರಿ ದತ್ತಪೀಠದ ಹೆಸರಿನಲ್ಲಿ ಕ್ಷೇತ್ರದ ಶಾಸಕರು ಅಧಿಕಾರಕ್ಕೆ ಬಂದು ಜಾತಿಗಳ ನಡುವೆ ಸಂಘರ್ಷ ಉಂಟು ಮಾಡಿದ್ದಾರೆ. ಯಾವುದೇ ಹಣದಿಂದ ಮತಗಳನ್ನು ಪಡೆಯಲು ಸಾಧ್ಯವಿಲ್ಲ. ರೈತರ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜೆಡಿಎಸ್ ಬೆಂಬಲಿಸಿ ಭ್ರಷ್ಟರನ್ನು ಅಧಿಕಾರದಿಂದ ದೂರವಿಡಬೇಕು ಎಂದು ಮನವಿ ಮಾಡಿದರು.
ಪಕ್ಷದ ಮುಖಂಡರಾದ ರವಿ, ಶಾಹಿದ್, ಅನ್ಸರ್ ಅಹ್ಮದ್, ಜೆಮ್ಷಿದ್ ಖಾನ್, ಶಾಹಿದ ಹಾಗೂ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.