ತೆರೆದ ಕೊಳವೆ ಬಾವಿ ಮುಚ್ಚಲು ಆಗ್ರಹ
ಕ.ಪ್ರ.ವಾರ್ತೆ, ನರಸಿಂಹರಾಜಪುರ, ಏ.5.
ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಹಳೇ ಮಂಡಗದ್ದೆ ರಸ್ತೆಯ ಈಶ್ವರ ದೇವಸ್ಥಾನದ ಸಮೀಪ ಉಪಯೋಗಿಸದ ತೆರೆದ ಕೊಳವೆ ಬಾವಿಯನ್ನು ಮುಚ್ಚದೆ ಹಾಗೇ ಬಿಟ್ಟಿರುವುದರಿಂದ ಮೃತ್ಯುವಿಗೆ ಆಹ್ವಾನ ನೀಡಿದಂತೆ ಆಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಈಗಾಗಲೇ ರಾಜ್ಯದ ಎಲ್ಲಾ ಕಡೆ ತೆರದ ಕೊಳವೆ ಬಾವಿಯಲ್ಲಿ ಸಣ್ಣ ಮಕ್ಕಳು ಬಿದ್ದ ಉದಾಹರಣೆ ನಮ್ಮ ಮುಂದೆ ಸಾಕಷ್ಟು ಇರುವಾಗಲೂ ಈ ಪ್ರದೇಶದಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚದೆ ಹಾಗೇ ಬಿಡಲಾಗಿದೆ.
ಸಾರ್ವಜನಿಕರಿಗೆ ಕುಡಿಯುವ ನೀರಿಗಾಗಿ ಪಟ್ಟಣ ಪಂಚಾಯ್ತಿಯವರು ಕೊಳವೆ ಬಾವಿ ತೆಗೆಸಿ ಮೋಟರ್ ಕೂಡಾ ಹಾಕಿದ್ದರು. ಪಕ್ಕದಲ್ಲೇ ಟ್ಯಾಂಕ್ ನಿರ್ಮಿಸಲಾಗಿತ್ತು. ಆದರೆ ನೀರಿನ ಕೊರತೆಯಿಂದ ಮೋಟರ್ ತೆಗೆಯಲಾಯಿತು.
ಕಾಲಿಗೆ ಗಾಯ: ಆದರೆ ಉಪಯೋಗಕ್ಕೆ ಬಾರದ ಕೊಳವೆ ಬಾವಿಯನ್ನು ಮುಚ್ಚದೆ ಹಾಗೇ ಬಿಟ್ಟಿರುವುದರ ಪರಿಣಾಮ ಕೆಲವು ದಿನಗಳ ಹಿಂದೆ ಮಗುವೊಂದು ಆಡಲು ಹೋಗಿ ಈ ಕೊಳವೆ ಬಾವಿಗೆ ಕಾಲು ಸಿಕ್ಕಿಬಿದ್ದು, ಗಾಯವಾಗಿತ್ತು. ಸಂಬಂಧಪಟ್ಟವರಿಗೆ ದೂರು ನೀಡಿದರೂ ಕೊಳವೆ ಬಾವಿಯನ್ನು ಮುಚ್ಚಿಲ್ಲ. ಸ್ಥಳೀಯರೇ ತಾತ್ಕಾಲಿಕವಾಗಿ ಕೊಳವೆ ಬಾವಿಗೆ ಕಲ್ಲನ್ನು ಮುಚ್ಚಿದ್ದಾರೆ. ಮತ್ತೆ ಇನ್ನೊಂದು ಅನಾಹುತ ಆಗುವ ಮೊದಲು ಕೊಳವೆ ಬಾವಿಯನ್ನು ಶಾಶ್ವತವಾಗಿ ಮುಚ್ಚಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

