ಚಿಕ್ಕಮಗಳೂರು

ಈ ಬಾರಿ ಕಾಂಗ್ರೆಸ್ ಗೆಲವು ಸಾಧಿಸಲಿದೆ: ಡಿ.ಎಂ. ವಿಜಯ್

Published On :

ಕ.ಪ್ರ ವಾರ್ತೆ, ಮೂಡಿಗೆರೆ, ಏ.5
ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷದ ಸಿದ್ಧಾಂತಕ್ಕೆ ಬದ್ದ. ಈ ಬಾರಿ ಕಾಂಗ್ರೆಸ್ ಗೆಲುವನ್ನು ಸಾಧಿಸಲಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ ಡಿ.ಎಂ. ವಿಜಯ್ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಯಾರೇ ಅಭ್ಯರ್ಥಿಗೆ ಬಿ.ಫಾರಂ ನೀಡಿದಲ್ಲಿ ಆಲ್ದೂರ್ ಬ್ಲಾಕ್ ಕಾಂಗ್ರೆಸ್‌ನ ಎಲ್ಲಾ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.
ಕೇಂದ್ರ ಸರ್ಕಾರ ಕಾಫಿ ಬೆಳೆಗಾರರಿಗೆ ಹಾಗೂ ರೈತರಿಗೆ ನೀಡಿರುವ ಪ್ಯಾಕೇಜ್ ಮತ್ತು ಭೂ ಒತ್ತುವರಿದಾರರಿಗೆ  ನ್ಯಾಯ ಒದಗಿಸುವುದರೊಂದಿಗೆ ಮನೆ ಇಲ್ಲದವರಿಗೆ ಮನೆಯನ್ನು ನೀಡುವ ಉದ್ದೇಶ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಮಾನದಂಡವಾಗಿ ಇಟ್ಟುಕೊಂಡು ರಾಜ್ಯ ಸರ್ಕಾರದ ಭ್ರಷ್ಟ ಆಡಳಿತ, ಮಹಿಳೆಯರ  ಮೇಲಿನ ದೌರ್ಜನ್ಯ, ಮರಳು ಮಾಫಿಯ ಸೇರಿದಂತೆ ಇನ್ನು ಹಲವು ಪ್ರಕರಣಗಳನ್ನು ಮತದಾರರಿಗೆ ತಿಳಿಸುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚಿಸಲಾಗುವುದು ಎಂದರು.
ಕಾಂಗ್ರೆಸ್ ಅಲೆ: ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಿ.ಸಿ. ಈರೇಗೌಡ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಪಕ್ಷಗಳು  ಹಣ ಹೆಂಡ ಹಂಚುವುದಿಲ್ಲ ಎಂದು ಪ್ರಮಾಣ ಮಾಡಿರುವುದು ಸಂತಸದ ವಿಷಯ. ಪ್ರಮಾಣ ಪ್ರಮಾಣಿಕವಾದಲ್ಲಿ ಮಾತ್ರ ಉತ್ತಮ ಆಡಳಿತ ಮಾಡಲು ಸಾಧ್ಯ. ಈ ಬಾರಿ ಕಾಂಗ್ರೆಸ್ ಅಲೆ ಎದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ  130ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುತ್ತೇವೆ ಎಂದರು.
ಎಚ್.ಡಿ. ಮಂಜುನಾಥ್ ಮಾತನಾಡಿ, ಹಿಂದೆ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಕಾರ್ಯ ಮಾಡಿ ಜನರ ಮನ್ನಣೆಗೆ ಪಾತ್ರವಾಗಿದೆ. ನಂತರ ಬಂದ  ಪಕ್ಷಗಳು ಭ್ರಷ್ಟಾಚಾರದಿಂದ ಕೂಡಿದೆ. ಬಿಜೆಪಿ ಒಡೆದ ಮನೆಯಾಗಿದ್ದು ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ  ದೊರೆಯಲಿದೆ ಎಂದು ಹೇಳಿಕೆ ನೀಡಿದರು. ಜಿ.ಎಚ್. ಹಾಲಪ್ಪಗೌಡ, ಸಿ.ಎಂ. ಗೋಪಾಲಗೌಡ, ಶಿವಾನಂದ್, ಇಮ್ತಿಯಾಜ್ ಅಹಮದ್, ಅಹಮದ್‌ಬಾವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.