ಅಕ್ರಮ ಮದ್ಯ ವಶ
ಚಿಕ್ಕಮಗಳೂರು: ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 10 ಲಕ್ಷ ಮೌಲ್ಯದ ಮದ್ಯವನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ವಿವಿಧ ಕಂಪನಿಯ 450 ಬಾಕ್ಸ್ ಮದ್ಯ, ಸ್ಥಳದಲ್ಲಿಯೇ ಇದ್ದ ವಾಹನ ಸೇರಿ ಮೂವರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿ ಎನ್. ಶಶಿಕುಮಾರ್ ಅವರ ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಸ್ಪೆಕ್ಟರ್ ಮಧು ಹಾಗೂ ಸಿಬ್ಬಂದಿ ದಾಳಿ ನಡೆಸಿ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೋಹನ್, ಚಂದ್ರಶೇಖರ್ ಹಾಗೂ ಪ್ರಸನ್ನ ಎಂಬುವವರನ್ನು ಬಂಧಿಸಲಾಗಿದ್ದು, ನೀತಿ ಸಂಹಿತೆ ಅಧಿಕಾರಿ ಬಸವರಾಜ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ.
ಅಲೆಗೆ ಸಿಲುಕಿ ವಿದ್ಯಾರ್ಥಿ ಸಾವು
ಕ.ಪ್ರ.ವಾರ್ತೆ, ಕಡೂರು, ಏ.7: ಕಡೂರು ಪಟ್ಟಣದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರ ಪುತ್ರ ಮಂಗಳೂರು ಸಮೀಪದ ಪಣಂಬೂರು ಬೀಚಿನಲ್ಲಿ ಈಜಲು ತೆರಳಿ ಅಲೆಯ ಸೆಳೆತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಆಕಾಶ್ ಮೃತ ವಿದ್ಯಾರ್ಥಿ. ಕಡೂರು ಪಟ್ಟಣದ ಹಳೇಪೇಟೆಯ ಸ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ರಮೇಶನಾಯ್ಕ ಎಂಬುವವರ ಪುತ್ರನಾಗಿರುವ ಆಕಾಶ್, ಬಾಳೆಹೊನ್ನೂರಿನ ನವೋದಯ ಶಾಲೆಯಲ್ಲಿ ಪಿಯುಸಿ ಪರೀಕ್ಷೆ ಮುಗಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

