ಕುಡಿವ ನೀರು ಪೂರೈಕೆಗೆ ಆದ್ಯತೆ
ಕ.ಪ್ರ.ವಾರ್ತೆ,ಬೀರೂರು, ಏ.7
ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿ ಹೋಗಿರುವ ಬೀರೂರು, ಕಡೂರು ಅವಳಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಹಾಗೂ ಜಾನುವಾರು ರಕ್ಷಣೆ ಉದ್ದೇಶದಿಂದ ಕುಡಿಯುವ ನೀರು ಪೂರೈಸುವ ಭದ್ರಾ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಯೋಜನೆಯನ್ನು ಶೀಘ್ರ ಅನುಷ್ಠಾನಕ್ಕೆ ತರುವುದು ತಮ್ಮ ಮೊದಲ ಆದ್ಯತೆ ಎಂದು ಕಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಮಲ್ಲಿಕಾರ್ಜುನ್ ತಿಳಿಸಿದರು.
ಬೀರೂರಿನ ತಮ್ಮ ನಿವಾಸದಲ್ಲಿ ನಡೆದ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಸಭೆಯಲ್ಲಿ ಮಾತನಾಡಿದರು.
ಅಭ್ಯಂತರವಿಲ್ಲ: ಬೀರೂರು ಪಟ್ಟಣದ ಅಭಿವೃದ್ದಿ ದೃಷ್ಟಿಯಿಂದ 15 ಎಕರೆ ವಿಸ್ತೀರ್ಣ ಹೊಂದಿರುವ ಎಸ್.ಆರ್. ಲಕ್ಷ್ಮಯ್ಯ ಆಶ್ರಯ ಬಡಾವಣೆಯ ಮುಂದಿನ ಐದು ಎಕರೆ ಪ್ರದೇಶವನ್ನು ಸಾರ್ವಜನಿಕ ಆಸ್ಪತ್ರೆ ಮತ್ತು ಪುರಸಭಾ ಕಾರ್ಯಾಲಯ ಸೇರಿದಂತೆ ಸರ್ಕಾರಿ ಕಚೇರಿಗಳ ನಿರ್ಮಾಣಕ್ಕೆ ಮೀಸಲಿಡಬೇಕು. ಉಳಿದ 10 ಎಕರೆ ಪ್ರದೇಶದಲ್ಲಿ ನಿವೇಶನ ಗುರುತಿಸಿ ಆಶ್ರಯ ಫಲಾನಭವಿಗಳಿಗೆ ಹಂಚಿಸಿದರೆ ನಮ್ಮದೇನು ಅಭ್ಯಂತರವಿಲ್ಲ ಎಂದರು.
ಗೆಲವು ಖಚಿತ; ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಒಡೆಯರ್ ಮಾತನಾಡಿ, ಕಾಂಗ್ರೆಸ್ ಗೆಲ್ಲಿಸಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ. ಕ್ಷೇತ್ರವನ್ನು ಜಾತಿ ಸಮೀಕರಣ ಮಾಡದೇ ಎಲ್ಲಾ ವರ್ಗದವರನ್ನು ಸಮಾನವಾಗಿ ನೋಡುವ ಕಾಂಗ್ರೆಸ್ ಜಾತಿ ಆಧಾರದ ಮೇಲೆ ಮತ ಯಾಚಿಸುವುದು ಬೇಡ. ಹಿಂದುಳಿದ ಅಲ್ಪಸಂಖ್ಯಾತರ ಮತ್ತು ದಲಿತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಾಣಿಕವಾಗಿ ಮತ್ತು ನಿಸ್ವಾರ್ಥತೆಯಿಂದ ದುಡಿದರೆ ಕಾಂಗ್ರೆಸ್ ಗೆಲವು ಖಚಿತ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ ಮಾತನಾಡಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್. ಆನಂದ್ ಮಾತನಾಡಿದರು. ಜಗದೀಶ್, ಚಂದ್ರಮೌಳಿ, ಪರಿಶಿಷ್ಟ ಜಾತಿ ವರ್ಗಗಳ ಅಧ್ಯಕ್ಷ ಚಂದ್ರಶೇಖರ್ ಮತ್ತು ಪುರಸಭಾ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

