ಚಿಕ್ಕಮಗಳೂರು

ಈ ಬಾರಿ ಕಾಂಗ್ರೆಸ್‌ಗೆ ಬಹುಮತ: ಶಾಂತೇಗೌಡ

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಏ.8
ಜಿಲ್ಲೆಯೂ ಸೇರಿದಂತೆ ರಾಜ್ಯದೆಲ್ಲೆಡೆ ಈ ಬಾರಿ ಕಾಂಗ್ರೆಸ್ ಪರ ಅಲೆ ಇದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಶಾಂತೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ತಮ್ಮ ನಿವಾಸದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಸ್ವಚ್ಛತೆ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ. ಅದರಂತೆ ಜಿಲ್ಲೆಯಲ್ಲೂ ಸಹ ಪಕ್ಷದ ಪರ ಅಲೆ ಕಂಡು ಬಂದಿದೆ ಎಂದರು.
ಕ್ರಮ ಜರುಗಿಸಿ: ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮತದಾರರಿಗೆ ಆಮಿಷ ಒಡ್ಡಲು ಈಗಾಗಲೇ ಕೆಲವು ಕಡೆ ಹೆಂಡ, ಸೀರೆಗಳನ್ನು ಗುಪ್ತವಾಗಿ ಶೇಖರಿಸಿಟ್ಟು ಎರಡು ಕಡೆ ಸಿಕ್ಕಿಹಾಕಿಕೊಂಡಿದ್ದಾರೆ. ಅಧಿಕಾರಿಗಳು ಅಕ್ರಮಗಳು ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಜೆಡಿಎಸ್ ಮುಖಂಡರು ಸೋಲಿನ ಹತಾಶೆಯಿಂದ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನದಲ್ಲಿದೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಪಕ್ಷ ಜಿಲ್ಲೆಯಲ್ಲಿ ವಿಧಾನಸಭೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಯಾವ ಸ್ಥಾನ ತಲುಪಿತ್ತು ಎಂಬುದನ್ನು ಅವರು ನೆನಪಿಸಿಕೊಳ್ಳಬೇಕು ಎಂದರು.
ಹಿರೇಗೌಜ ಗ್ರಾಪಂ ಉಪಾಧ್ಯಕ್ಷ ಶಶಿಧರ್, ಲಕ್ಯಾ ಮಂಡಲ್ ಮಾಜಿ ಸದಸ್ಯ ಸಿ. ಹಾಲಪ್ಪ, ಜೆಡಿಎಸ್ ಪಕ್ಷದ ಹಿರೇಗೌಜ ವಿ.ಎಸ್.ಎಸ್. ಅಧ್ಯಕ್ಷ ಸಿ.ಆರ್. ಮಾಸ್ತೇಗೌಡ, ಆಟೋ ಸಂಘದ ಸಂಘಟನಾ ಕಾರ್ಯದರ್ಶಿ ಲಕ್ಯಾ ಲೋಹಿತ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಂಗೇಗೌಡ, ಭದ್ರೇಗೌಡ, ಚಂದ್ರೇಗೌಡ, ಚಂದ್ರಪ್ಪ, ಮುಖಂಡ ಕೆ.ವಿ. ಮಂಜುನಾಥ್, ಮೋಹನ್,ನಾಗರಾಜ್, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.