ಜೆಡಿಎಸ್‌ಗೆ ಸೊರಬ ಶಾಕ್ ನೀಡಲಿದೆ: ಕುಮಾರ್ ಬಂಗಾರಪ್ಪ
ಕ.ಪ್ರ.ವಾರ್ತೆ, ಸೊರಬ, ಏ.8
ಜಿಲ್ಲೆಯಲ್ಲಿ ಎಸ್. ಬಂಗಾರಪ್ಪ ಅವರ ರಾಜಕೀಯ ಶಕ್ತಿಯನ್ನು ಬಳಸಿಕೊಂಡು ತನ್ನ ಅಸ್ತಿತ್ವವನ್ನು ಸ್ಥಾಪಿಸಬಹುದು ಎಂಬ ದೂರಾಲೋಚನೆ ಇರುವ ಜೆಡಿಎಸ್ ಮುಖಂಡರಿಗೆ ಸೊರಬ ಕ್ಷೇತ್ರ ನೆನಪಲ್ಲುಳಿಯುವ ಶಾಕ್ ನೀಡಲಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಭವಿಷ್ಯ ನುಡಿದರು.
ತಂದೆ ಮಕ್ಕಳ ಪಕ್ಷ: ತಾಲೂಕು ಪ್ರವಾಸದಲ್ಲಿರುವ ಅವರು ಗ್ರಾಮ ಮಟ್ಟದ ಚುನಾವಣಾ ಪ್ರಚಾರ ನಡೆಸುತ್ತಿದ್ದು, ಪಟ್ಟಣಕ್ಕೆ ಸಮೀಪದ ಕೊಡಕಣಿ ಗ್ರಾಮದ ಸಭೆ ಉದ್ಧೇಶಿಸಿ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಜೆಡಿಎಸ್ ಒಂದು ಪಕ್ಷವೆ ಅಲ್ಲ, ಅದು ತಂದೆ ಮಕ್ಕಳ ಪಕ್ಷ, ಇಲ್ಲಿ ರಾಜಕಾರಣದ ಯಾವುದೇ ತತ್ವ ಸಿದ್ಧಾಂತಗಳಿಲ್ಲ, ಕೇವಲ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿರುವ ಈ ಪಕ್ಷದಿಂದ ಜನತೆಗೆ ಯಾವುದೇ ಉಪಯೋಗವಾಗುವುದಿಲ್ಲ ಎಂದ ಅವರು, ಪ್ರಸ್ತುತ ಎಚ್.ಡಿ. ಕುಮಾರಸ್ವಾಮಿಯವರು ತಾಲೂಕಿನಲ್ಲಿ ಪರ್ಯಾಯ ನಾಯಕತ್ವವನ್ನು ಸೃಷ್ಟಿಮಾಡುವ ವಿಫಲ ಪ್ರಯತ್ನದಲ್ಲಿದ್ದಾರೆ ಎಂದು ಲೇವಡಿ ಮಾಡಿದರು.
ಸಿದ್ಧಾಂತ ಗಾಳಿಗೆ: ರಾಜ್ಯದಲ್ಲಿ ಆಡಳಿತ ನಡೆಸಿರುವ ಬಿಜೆಪಿ ತನ್ನ ಮೂಲತತ್ವ ಸಿದ್ಧಾಂತಗಳನ್ನು ಗಾಳಿಗೆ ತೂರುವ ಮೂಲಕ ಜನತೆಗೆ ವಂಚಿಸಿದೆ ಹಾಗಾಗಿ ಈ ಬಾರಿ ಕಾಂಗ್ರೆಸ್ಸಿಗೆ ಕೈ ಜೋಡಿಸುವ ಮೂಲಕ ಜನತೆಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಅವಕಾಶ ನೀಡಬೇಕು ಎಂದು ವಿನಂತಿಸಿದರು.
ಕೊಡಕಣಿ ಗ್ರಾಪಂ ಅಧ್ಯಕ್ಷ ರಾಮಚಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಜೆ. ಶಿವಾನಂದಪ್ಪ, ತಾಪಂ ಸದಸ್ಯ ಕೆ. ಅಜ್ಜಪ್ಪ, ಪಪಂ ಸದಸ್ಯ ಎಂ.ಡಿ. ಉಮೇಶ್, ಬಲರಾಮಪ್ಪ, ಏಕಾಂತಪ್ಪ, ದೊಡ್ಮನೆ ಹನುಮಂತಪ್ಪ, ಗಿರೀಶ್ ಶೇಠ್, ಶಿವಪ್ಪ, ಯುವರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

