ಮತದಾರರ ಜಾಗೃತಿಗೆ ಆಂದೋಲನ
ಚಿಕ್ಕಮಗಳೂರು: ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ.
ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್)ಕಾರ್ಯಕ್ರಮದ ಅಂಗವಾಗಿ ಇದೀಗ ಚುನಾವಣೆ ದಿನಾಂಕದಂದು ಹೆಚ್ಚು ಹೆಚ್ಚು ಮಂದಿ ಮತಗಟ್ಟೆಯಡೆಗೆ ತೆರಳಲು ಜಿಲ್ಲಾಡಳಿತ ಶಾಲಾ ಮಕ್ಕಳ ಮೂಲಕ ಅಭಿಯಾನ ನಡೆಸುತ್ತಿದೆ.
ಇದರ ಅಂಗವಾಗಿ ಪೋಷಕರಿಗೆ ತಮ್ಮ ಮಕ್ಕಳ ಮೂಲಕ ಪ್ರತಿಜ್ಞಾವಿಧಿ ಬೋಧಿಸಲು ನಿರ್ಧರಿಸಲಾಗಿದೆ. ಈ ಪ್ರಯುಕ್ತ ಜಿಲ್ಲೆಯಲ್ಲಿರುವ ಸುಮಾರು 1.65 ಲಕ್ಷ ಶಾಲಾ ಮಕ್ಕಳಿಗೆ ಪ್ರತಿಜ್ಞಾವಿಧಿ ಇರುವ ಕರಪತ್ರಗಳನ್ನು ಜಿಲ್ಲಾಡಳಿತ ನೀಡಿದೆ. ಈಗಾಗಲೇ ಈ ಕರಪತ್ರಗಳನ್ನು ಮುದ್ರಿಸಿ, ಶಿಕ್ಷಣ ಇಲಾಖೆ ಮೂಲಕ ಜಿಲ್ಲೆಯ ಎಲ್ಲಾ ಶಾಲೆಗಳಿಗೂ ತಲುಪಿಸಲಾಗಿದೆ.
ಮನೆಯಲ್ಲಿ ಪ್ರತಿಜ್ಞಾವಿಧಿ: ಈ ಕರಪತ್ರದಲ್ಲಿ ಪ್ರತಿಜ್ಞಾವಿಧಿಯೊಂದಿಗೆ ಆಯಾ ವಿದ್ಯಾರ್ಥಿಯ ಹೆಸರು, ಶಾಲೆ, ಪೋಷಕರ ಸಹಿ ಇರಲಿದೆ. ಮಕ್ಕಳು ತಮ್ಮ ಮನೆಯಲ್ಲಿಯೇ ಪಾಲಕರಿಗೆ ಈ ಪ್ರತಿಜ್ಞಾವಿಧಿ ಬೋಧಿಸಬೇಕಿದೆ. ಬಳಿಕ ಪೋಷಕರಿಂದ ಇದಕ್ಕೆ ಸಹಿ ಪಡೆಯಬೇಕು.ಸಹಿ ಹಾಕಿದ ಕರಪತ್ರವನ್ನು ವಿದ್ಯಾರ್ಥಿ ಶಾಲಾ ಶಿಕ್ಷಕರಿಗೆ ಹಿಂದಿರುಗಿಸಬೇಕು.
ಏ.10ರೊಳಗೆ ಈ ಕಾರ್ಯಕ್ರಮ ಮುಗಿಯಲಿದೆ.
ಪ್ರತಿಜ್ಞಾವಿಧಿ ಪೂರ್ಣ ರೂಪ ಈ ರೀತಿ ಇದೆ. ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆ ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

