ಚಿಕ್ಕಮಗಳೂರು

ಅಭಿವೃದ್ಧಿ ಸಹಿಸದೆ ಹುಸಿ ಆರೋಪ: ಸಿ.ಟಿ. ರವಿ

Published On :

ಕ.ಪ್ರ.ವಾರ್ತೆ ಟಿ ಚಿಕ್ಕಮಗಳೂರು ಟಿ  ಏ.9
ವಿರೋಧ ಪಕ್ಷದವರು ಅಭಿವೃದ್ಧಿ ಕೆಲಸಗಳನ್ನು ಸಹಿಸದೆ ಆಧಾರವಿಲ್ಲದ ಹುಸಿ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಆರೋಪವೂ ಸಾಭೀತಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದ್ದಾರೆ.
ನಗರದ ಪಾಂಚಜನ್ಯ ಕಚೇರಿಯಲ್ಲಿ ಮಂಗಳವಾರ ನಡೆದ ಟ್ಯಾಕ್ಸಿ ಮಾಲೀಕರ ಮತ್ತು ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಸಮಾಜ ಹಾಗೂ ವರ್ಗಗಳಿಗೆ ಸಮನಾಗಿ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಪಕ್ಷಭೇದ ಮಾಡದೆ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗಿದೆ ಎಂದರು.
ಸಮಸ್ಯೆಗೆ ಹಣ ಪರಿಹಾರವಲ್ಲ: ಎಲ್ಲರ ಸಮಸ್ಯೆಗೂ ಹಣ ಕೊಡಲು ಸಾಧ್ಯವಿಲ್ಲ. ಶಿಕ್ಷಣದಿಂದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಜಾಗೃತರಾಗಲೆಂದು ನಗರಕ್ಕೆ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳನ್ನು ತಂದಿದ್ದೇನೆ. ಇದರಿಂದ ಹೊರ ರಾಜ್ಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನಗರಕ್ಕೆ ಬರುವುದರಿಂದ ವಾಣಿಜ್ಯೋದ್ಯಮ ಚುರುಕುಗೊಳ್ಳುತ್ತದೆ ಎಂದರು.
ಟ್ಯಾಕ್ಸಿ ಚಾಲಕ ಜಾನಿ ಮಾತನಾಡಿ, ಟ್ಯಾಕ್ಸಿ ನಿಲ್ದಾಣ ಮತ್ತು ವಿಶ್ರಾಂತಿ ಕೊಠಡಿ ನೀಡುವುದರ ಜೊತೆಗೆ ಬಡ ಚಾಲಕರಿಗೆ ಆಶ್ರಯ ಮನೆಗಳನ್ನು ನೀಡಬೇಕು. ದತ್ತಪೀಠದಲ್ಲಿ ರಸ್ತೆ ಕಾಮಗಾರಿ ವಿಳಂಬವಾಗಿ ಪ್ರವಾಸಗರಿಗೆ ಬಹಳ ತೊಂದರೆಯಾಗಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ ಶೌಚಾಲಯವಿಲ್ಲದೆ ಮಹಿಳೆಯರು ಪರದಾಡುತ್ತಿದ್ದಾರೆ. ತಕ್ಷಣವೇ ಸುಲಭ್ ಶೌಚಾಲಯ ಕಲ್ಪಿಸಿಕೊಡಬೇಕು. ಟ್ಯಾಕ್ಸಿಯವರಿಗೆ ಟ್ರಾಫಿಕ್ ಪೊಲೀಸರಿಂದ ಸುಲಿಗೆ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮೂರ್ತಿ, ಸದಸ್ಯರಾದ ವಸಂತ್, ಪ್ರಮೋದ್, ರವಿ, ಅನಿಲ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.