ಬೇಸಿಗೆ ಶಿಬಿರಕ್ಕೆ ಚಾಲನೆ
ನರಸಿಂಹರಾಜಪುರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ 10 ದಿನಗಳ ಕಾಲ ನಡೆಯುವ ಮಕ್ಕಳ ಬೇಸಿಗೆ ಶಿಬಿರಕ್ಕೆ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಸಾಹಿತಿ ಎಂ. ಜಯಮ್ಮ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ಹೊಸ ಕಲಿಕೆಯ ಪರಿಚಯವಾಗುತ್ತದೆ. ಸಂಪನ್ಮೂಲ ವ್ಯಕ್ತಿಗಳು ಕಲಿಸುವ ಮಾಹಿತಿಯ ಉಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಜ್ಯೋತಿಲಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಭವನ ಸೊಸೈಟಿಯಿಂದ ಪ್ರತಿ ವರ್ಷ ಉಚಿತವಾಗಿ ಬೇಸಿಗೆ ಮಕ್ಕಳ ಶಿಬಿರ ಏರ್ಪಡಿಸಲಾಗುತ್ತದೆ. ಈ ಬಾರಿ 10 ದಿನಗಳ ಶಿಬಿರ ನಡೆಸಲಿದ್ದು, 6ರಿಂದ 16 ವಯೋವಾನದ ಶಿಬಿರದಲ್ಲಿ ಪಾಲ್ಗೊಳ್ಳಬಹುದು.
ಯೋಗ, ಚಿತ್ರ ಕಲೆ, ಕರಕುಶಲ ತರಬೇತಿ, ಸಂಗೀತ, ಗೊಂಬೆ ತಯಾರಿಕೆ, ವ್ಯಕ್ತಿತ್ವ ವಿಕಸನ ಮುಂತಾದ ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ ಎಂದರು. ಅತಿಥಿಗಳಾಗಿ ಪತ್ರಕರ್ತ ಯಡಗೆರೆ ಮಂಜುನಾಥ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಜಿ. ಪುರುಶೋತ್ತಮ್, ಶಿಕ್ಷಕಿ ಮಮತನಾಗರಾಜ್ ದ್ದರು. ತೃಪ್ತಿ ಪ್ರಾರ್ಥಿಸಿದರು. ಬಂಗಾರಿ ಹೆಗಡೆ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

