'ಮತದಾನದ ಪಾವಿತ್ರ್ಯದ ಅರಿವು ಅಗತ್ಯ'
ಕ.ಪ್ರ.ವಾರ್ತೆ ಟಿ ತರೀಕೆರೆ ಟಿ ಏ.9
ಮತದಾನ ಪವಿತ್ರವಾದ ಹಕ್ಕು ಎಂದು ತರೀಕೆರೆ ಉಪ ವಿಭಾಗಾಧಿಕಾರಿ ಜಿ. ಅನುರಾಧ ತಿಳಿಸಿದ್ದಾರೆ.
ಮಂಗಳವಾರ ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ಜನಚಿಂತನ ಸಂಸ್ಥೆ, ಕನ್ನಡ ಯುವ ಸಂಘ, ತುಂಗಭದ್ರ ಮಹಾ ವಿದ್ಯಾಲಯ ವತಿಯಿಂದ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಮತದಾನ ಜಾಗೃತ ಆಂದೋಲನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಚುನಾವಣೆಯ ಮಹತ್ವ ಮತ್ತು ಮತದಾನದ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಸೂದೆಯಲ್ಲಿ ಮತ್ತು ಶಾಸಕಾಂಗದಲ್ಲಿ ಇದಕ್ಕೆ ಮನ್ನಣೆ ನೀಡಲಾಗಿದ್ದು, ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗಿದೆ. ಸುಭದ್ರ ರಾಷ್ಟ್ರ ನಿರ್ಮಿಸುವಲ್ಲಿ ನಿಮ್ಮ ಪಾತ್ರ ಬಹಳ ನಿರ್ಣಾಯಕವಾಗಿರುತ್ತದೆ ಎಂದರು.
ಜನಚಿಂತಸ ಸಂಸ್ಥೆ ಅಧ್ಯಕ್ಷ ಎನ್. ವೀರಭದ್ರಪ್ಪ ಮಾತನಾಡಿ, ವಿವೇಚನೆ ಮತ್ತು ಪ್ರಜ್ಞಾವಂತಿಕೆಯಿಂದ ಮತದಾನ ಮಾಡಬೇಕು. ಬೇರೆಯವರಿಗೂ ಈ ವಿಚಾರವನ್ನು ತಿಳಿಸಬೇಕು ಎಂದು ಸಲಹೆ ನೀಡಿದರು.
ತರೀಕೆರೆ ಡಿವೈಎಸ್‌ಪಿ ಸದಾನಂದ ಬಿ. ನಾಯಕ್ ಮಾತನಾಡಿ, ಮತದಾನ ಸಂವಿಧಾನದ ಹಕ್ಕು ಮತ್ತು ಕರ್ತವ್ಯವಾಗಿದೆ. ಸಮರ್ಥ ಸರ್ಕಾರ ರಚಿಸುವಲ್ಲಿ ನಿಮ್ಮ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಹಣ ಸೀರೆ ಇತ್ಯಾದಿ ಹಂಚುವುದು ಅಪರಾಧ, ಇಂತಹುಗಳು ಕಂಡುಬಂದರೆ ತಕ್ಷಣವೇ ತಿಳಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಶ್ರೀನಿವಾಸ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಸಾರ್ಥಕತೆ ತಂದಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

