ಚಿಕ್ಕಮಗಳೂರು

ಬಿಜೆಪಿಯದ್ದು ಬೋಗಸ್ ರಾಜಕಾರಣ: ಸಗೀರ್ ಅಹ್ಮದ್

Published On :

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ. 12
ಬಿಜೆಪಿಯದ್ದು ಬೋಗಸ್ ರಾಜಕಾರಣ. ಶಾಸಕರು, ಮಂತ್ರಿಗಳು ಜೈಲಿಗೆ ಹೋಗಿ ಬಂದಿದ್ದಾರೆ. ಹಲವು ಭ್ರಷ್ಟಾಚಾರಗಳಲ್ಲಿ ತೊಡಗಿ ಮಾನಕಳೆದುಕೊಂಡು ರಾಜ್ಯದ ಜನರಿಗೂ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಸಿ.ಆರ್. ಸಗೀರ್ ಅಹ್ಮದ್ ಆರೋಪಿಸಿದ್ದಾರೆ.
ನಗರದ ಎನ್.ಎಂ.ಸಿ. ವೃತ್ತದ ಬಳಿ ಶುಕ್ರವಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಶಾಸಕರು ನಗರದ ಸುತ್ತಮುತ್ತ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವುದು ಜನರಿಗೆ ಗೊತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಹಣ ಲೂಟಿ ಹೊಡೆದಿದ್ದಾರೆ.  ಅವರಿಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದರು.
ಹೆಚ್ಚಿನ ಭ್ರಷ್ಟಾಚಾರ: ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆದಿದೆ. ಪವಿತ್ರವಾದ ವಿಧಾನಸಭೆಯಲ್ಲಿ ಬ್ಲೂ ಫಿಲಂ ನೋಡುವುದರ ಮೂಲಕ ಸದನಕ್ಕೆ ಅಪಮಾನ ಮಾಡಿದ್ದರೂ ಅವರನ್ನು ಸಮರ್ಥಿಸಿಕೊಂಡ ಭಂಡರು ಇವರು. ರೇಣುಕಾಚಾರ್ಯ, ಹರತಾಳು ಹಾಲಪ್ಪ, ರಘುಪತಿ ಭಟ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಇವರುಗಳ ಹಗರಣ ರಾಜ್ಯಕ್ಕೆ ಗೊತ್ತಿದೆ. ಈ ಬಾರಿ ಚುನಾವಣೆಯಲ್ಲಿ ರಾಜ್ಯದಾದ್ಯಂತ ಬಿಜೆಪಿಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಸಿರಿಗೆರೆ ಶ್ರೀ ಎದುರು ಪ್ರಮಾಣ ಮಾಡಿ ರಾತ್ರೋರಾತ್ರಿ ಪಕ್ಷದ ಕಾರ್ಯಕರ್ತರು ಹೆಂಡ, ಸೀರೆ, ಉಂಗುರಗಳನ್ನು ಹಂಚುತ್ತಿದ್ದಾರೆ. ನೀತಿ ಸಂಹಿತೆ ಇದ್ದರೂ, ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಆದರೂ ಚುನಾವಣಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ ಸಂಗತಿ ಎಂದು ಹೇಳಿದರು.
ಕಾಂಗ್ರೆಸ್ ಬೆಂಬಲಿಸಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಲ್. ಮೂರ್ತಿ ಮಾತನಾಡಿ, ಲೋಕಸಭಾ ಚುನಾವಣೆಗೆ ಎಲ್ಲರೂ ಬೆಂಬಲಿಸಿದಂತೆ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಬೆಂಬಲಿಸಿ, ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಭ್ರಷ್ಟರನ್ನು ಸೋಲಿಸಬೇಕು. ಕಾಂಗ್ರೆಸ್‌ಗೆ ಅಭ್ಯರ್ಥಿಯೇ ಇಲ್ಲದೆ ಗುತ್ತಿಗೆದಾರರಿಗೆ ಟಿಕೆಟ್ ನೀಡಿದ್ದೇವೆ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ. ಶಾಂತೇಗೌಡರ ಕ್ರಷ ಅನ್ನು ಕಿತ್ತುಕೊಂಡು ವರು ಗುತ್ತಿಗೆದಾರರಾಗಲು ಹೊರಟರೆ ಅವರು ಜನಪ್ರತಿನಿಧಿಯಾಗುವುದು ತಪ್ಪೇ ಎಂದು ಕಾರ್ಯಕರ್ತರನ್ನು ಪ್ರಶ್ನಿಸಿದರು.
ಶಾಂತೇಗೌಡ, ಪಕ್ಷದ ಮುಖಂಡ ಪರಮೇಶ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್ ಉರಾಳ್, ಮುಖಂಡ ಕೆ. ಮಹಮ್ಮದ್, ಎನ್. ಮಹೇಶ್, ಕೆಂಗೇಗೌಡ, ಮಂಜುನಾಥ್, ದೇವೇಗೌಡ, ವೆಂಕಟೇಶ್ ನಾಯ್ಡು, ವಿಪ ಸದಸ್ಯೆ ಗಾಯತ್ರಿ ಶಾಂತೇಗೌಡ, ಆರತಿ ನಾರಾಯಣ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.